ಹವಾಮಾನ ವರದಿ | 25-09-2024 | ಸೆ. 28ರಿಂದ ಮಳೆ ಕಡಿಮೆ | ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರಿಕೆ |

September 25, 2024
12:18 PM

26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನಕ್ಕೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಸೆಪ್ಟೆಂಬರ್ 28ರಿಂದ ಮಳೆ ಕಡಿಮೆಯಾಗಲಿದೆ. 29ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು. ಅಲ್ಲಿಯ ತನಕ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 26ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 29ರಿಂದ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮಂಡ್ಯ, ರಾಮನಗರ, ಬೆಂಗಳೂರು ನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 26ರಿಂದ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಕಡಿಮೆಯಾಗಲಿದ್ದು. ಸೆಪ್ಟೆಂಬರ್ 29ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror