26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನಕ್ಕೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಸೆಪ್ಟೆಂಬರ್ 28ರಿಂದ ಮಳೆ ಕಡಿಮೆಯಾಗಲಿದೆ. 29ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು. ಅಲ್ಲಿಯ ತನಕ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 26ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 29ರಿಂದ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮಂಡ್ಯ, ರಾಮನಗರ, ಬೆಂಗಳೂರು ನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 26ರಿಂದ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಕಡಿಮೆಯಾಗಲಿದ್ದು. ಸೆಪ್ಟೆಂಬರ್ 29ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು,…
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…