29.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 29 ಹಾಗೂ 30ರಂದು ಉತ್ತರ ಕನ್ನಡ ಸಾಮಾನ್ಯ ಇದ್ದರೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 31ರಿಂದ ಕಡಿಮೆಯಾಗಿ ಜೂನ್ 3ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ತೀರಾ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 29ರಂದು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಮೇ 30ರಂದು ಕೊಡಗು ಜಿಲ್ಲೆಯಲ್ಲಿ ಮಾತ್ರ ಭಾರಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೇ 31ರಿಂದ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಮೇ 29ರಂದು ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, 30ರಂದು ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೇ 31ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ .
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…