ಇಡೀ ವಿಶ್ವ ಇಂದು ಹವಾಮಾನ ವೈಪರೀತ್ಯಕ್ಕೆ ಒಳಗಾಗಿದೆ. ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಹಸಿರು ಜಲಜನಕ ಸಮಾವೇಶ ಉದ್ದೇಶಿಸಿ ವರ್ಚುವಲ್ ಮಾಧ್ಯಮದ ಮೂಲಕ ಪ್ರಧಾನಿ, ಭಾರತ ಹಸಿರು ಇಂಧನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಾಷ್ಟ್ರೀಯ ಹಸಿರು ಇಂಧನ ಮಿಷನ್ ಕಾರ್ಯಕ್ರಮ ಜಾರಿಗೊಳಿಸಿದೆ. ಮುಂದಿನ ಪೀಳಿಗೆಗೆ ಸ್ವಾಸ್ಥ್ಯ ಪರಿಸರ ನೀಡುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸುಸಜ್ಜಿತ, ಸುಭದ್ರ ಹಸಿರು ಜಲಜನಕ ಬಳಕೆ ನಮ್ಮ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಭಾರತ, ಜಿ-20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಂದರ್ಭದಲ್ಲಿ ಹಸಿರು ಹೈಡ್ರೋಜನ್ ಪ್ರಾಮುಖ್ಯತೆ ಪ್ರತಿಪಾದಿಸಿತ್ತು. ಹಸಿರು ಇಂಧನ ಬಳಕೆಯಲ್ಲಿ ಜಿ-20 ರಾಷ್ಟ್ರಗಳ ಪಾತ್ರ ಹಿರಿದು ಎಂದರು. ವಿಶ್ವ ಇಂದು ಎದುರಿಸುತ್ತಿರುವ ಹವಾಮಾನ ಬದಲಾವಣೆ ಸವಾಲನ್ನು ಸಮರ್ಥವಾಗಿ ನಿಭಾಯಿಸಬೇಕಾದರೆ, ಜಾಗತಿಕ ಸಮೂಹದ ಒಗ್ಗೂಡುವಿಕೆ ಅಗತ್ಯ. ಹೊಸ ಅಲೋಚನೆಗಳು, ಆವಿಷ್ಕಾರಗಳಿಂದ ಈ ಸಮಸ್ಯೆಯನ್ನು ನಿವಾರಿಸಬಹುದು ಎಂದು ತಿಳಿಸಿದ ನರೇಂದ್ರ ಮೋದಿ ಅವರು, ಇಂದು ನಾವು ತೆಗೆದುಕೊಳ್ಳುವ ನಿರ್ಣಯ, ಮುಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಲಿದೆ. ಹಾಗಾಗಿ ಹೊಸ ಕ್ಷೇತ್ರದಲ್ಲಿ ನವ ಚಿಂತನೆಯ ಅಗತ್ಯವಿದೆ ಎಂದು ಹೇಳಿದರು.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…