ಕನ್ನಡ ಪದವನ್ನು ಹೆಚ್ಚು ಹೆಚ್ಚಾಗಿ ಬಳಸಿ ಕನ್ನಡ ಅಭಿಮಾನ ಮೆರೆಯೋಣ. ನಮ್ಮ ದೇಶ, ಭಾಷೆ, ಸಂಸ್ಕøತಿಯ ಒಲವು ಬೆಳೆಸಿಕೊಂಡು ಸ್ವಾಭಿಮಾನ ಮೆರೆಯೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.
ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 33ನೇ ದಿನವಾದ ಸೋಮವಾರ ರಾಮಕೃಷ್ಣ ದಂಟಿನಮನೆ ಕುಟುಂಬದಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ದಿನಕ್ಕೊಂದು ಇಂಗ್ಲಿಷ್ ಪದ ತ್ಯಜಿಸುವ ಅಭಿಯಾನದಲ್ಲಿ ಫ್ಯಾನ್ ಶಬ್ದವನ್ನು ಬಿಡುವಂತೆ ಸಲಹೆ ಮಾಡಿದರು. ಕನ್ನಡದಲ್ಲಿ ಪಂಖ ಎಂಬ ಶಬ್ದವನ್ನು ಪರ್ಯಾಯವಾಗಿ ಬಳಸಬೇಕು. ಸಂಸ್ಕೃತ ಮೂಲದ ಶಬ್ದ ಇದಾಗಿದ್ದು, ಇತ್ತೀಚಿನವರೆಗೂ ಬಳಕೆಯಲ್ಲಿತ್ತು. ಆದರೆ ಇಂದು ಬಳಕೆಯಿಂದ ಮರೆಯಾಗಿದೆ. ಈ ಶಬ್ದವೇ ಬಳಕೆಯಲ್ಲಿಲ್ಲ. ನಾವು ಶುದ್ಧ ಭಾಷೆಯಿಂದ ಬಹಳಷ್ಟು ದೂರ ಬಂದಿದ್ದೇವೆ. ಅಲ್ಲಿಂದ ನಾವು ಮೂಲಕ್ಕೆ ಮರಳಬೇಕಿದೆ ಎಂದರು.
ಸಂಸ್ಕೃತದಲ್ಲಿ ಬಳಕೆಯಲ್ಲಿರುವ ವ್ಯಜನ ಶಬ್ದ ಕೂಡಾ ಬಳಕೆಯೋಗ್ಯ. ತಾಪವನ್ನು ಕಡಿಮೆ ಮಾಡಲು ಬಳಸುವ ಸಾಧನ. ಚಾಮರ, ಮಯೂರಿ, ತಾಲಬಂತ, ವೇತಸ ಹೀಗೆ ಹಲವು ಬಗೆಯ ವ್ಯಜನಗಳಿವೆ. ವ್ಯಜನಕ್ಕೆ ಕನ್ನಡದಲ್ಲಿ ಬೀಸಣಿಕೆ ಶಬ್ದವಿದೆ. ಆದ್ದರಿಂದ ಫ್ಯಾನ್‍ಗೆ ತಿರುಗು ಬೀಸಣಿಕೆ ಎಂದು ಬಳಸಬಹುದು ಎಂದು ಸಲಹೆ ಮಾಡಿದರು.
ಚಾತುರ್ಮಾಸ್ಯ ಎನ್ನುವುದು ಸನ್ಯಾಸಿಗಳ ಹಬ್ಬ; ಜನಸಾಮಾನ್ಯರಿಗೆ ಚೌತಿ, ದೀಪಾವಳಿ, ಯುಗಾದಿ ಹೀಗೆ ಹಲವು ಹಬ್ಬಗಳಿದ್ದರೆ ಸನ್ಯಾಸಿಗಳಿಗೆ ಇರುವ ಏಕೈಕ ಹಬ್ಬ ಅರುವತ್ತು ದಿನಗಳ ಕಾಲ ನಡೆಯುತ್ತಿದೆ. ಗುರು, ರಾಮನ ಆಶೀರ್ವಾದ ಪಡೆಯುತ್ತಿದ್ದು, ಜೀವನಕ್ಕೆ ಸರಿಯಾದ ದಾರಿ ಒದಗಿಬರಲಿ. ಸದಾಶಯ- ಸದಾಪೇಕ್ಷೆಗಳು ಫಲಿಸಲಿ ಎಂದು ಆಶೀರ್ವದಿಸಿದರು.
ಶಾಸನತಂತ್ರ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಎಂಜಿನಿಯರ್ ವಿಷ್ಣು ಬನಾರಿ, ಚಾತುರ್ಮಾಸ್ಯ ತಂಡದ ಅರವಿಂದ ಧರ್ಬೆ ಮತ್ತಿತರರು ಉಪಸ್ಥಿತರಿದ್ದರು. ಮಡಿವಾಳ ಮತ್ತು ಹಳ್ಳೇರಿ ಸಮಾಜದಿಂದ ಸ್ವರ್ಣಪಾದುಕಾ ಸೇವೆ ನೆರವೇರಿತು.
ಹೈಗುಂದ ದುರ್ಗಾಂಬಿಕಾ ದೇವಾಲಯ ವತಿಯಿಂದ ಪಾದುಕಾಪೂಜೆ ನಡೆಯಿತು. ಮಡಿವಾಳ ಸಮಾಜ ಇಡೀ ಸಮಾಜವನ್ನು ಶುದ್ಧಿ ಮಾಡುವಂಥದ್ದು. ಸಮಾಜ ಸದಾ ಬೆಳಗಲಿ ಎಂದರು. ಕಷ್ಟ ಕಾರ್ಪಣ್ಯದಿಂದ ಬಳಲುತ್ತಿರುವ ಹಳ್ಳೇರಿ ಸಮಾಜವನ್ನು ರಾಮದೇವರು ಸಮೃದ್ಧವನ್ನಾಗಿ ಮಾಡಲಿ ಎಂದು ಹರಸಿದರು.
ಗೋಕರ್ಣದ ಸಾಂಸ್ಕೃತಿಕ ಪ್ರತಿಷ್ಠಾನ ಸಂಯೋಜನೆಯಲ್ಲಿ ಆಯೋಜಿಸಿದ್ದ ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ರಾಮಾಂಜನೇಯ ಯಕ್ಷಗಾನ ಪ್ರೇಕ್ಷಕರ ಮನ ಸೂರೆಗೊಂಡಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕರಾದ ಸಂಜೀವ ಮಠಂದೂರು, ಸುನೀಲ್ ನಾಯ್ಕ, ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್.ಹೆಗಡೆ ಶ್ರೀಗಳಿಂದ ಆಶೀರ್ವಾದ ಪಡೆದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…