ಹಾವೇರಿ ಜಿಲ್ಲೆಯಲ್ಲಿ ಪತ್ತೆಯಾದ ಕಳಪೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟಗಾರರ ಲೈಸನ್ಸ್ ರದ್ದು ಮಾಡಿ, ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಣೇಬೆನ್ನೂರು ಉತ್ತಮ ಬೀಜಗಳಿಗೆ ಹೆಸರಾಗಿತ್ತು. ಈಗ ಕಳಪೆ ಬೀಜ ಮಾರಾಟದಿಂದ ಜಿಲ್ಲೆ ಸುದ್ದಿಯಲ್ಲಿದೆ. ರಾಜ್ಯ ಮಟ್ಟದ ಜಾಗೃತ ತಂಡ ಕರೆಸಿ ಪರಿಶೀಲನೆ ನಡೆಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಶಿಗ್ಗಾಂವಿ ತಾಲೂಕಿನಲ್ಲಿ ನಕಲಿ ಪಹಣಿ ತಯಾರಿಸಿ ರೈತರಲ್ಲದವರು ಬೆಳೆಹಾನಿ ಪರಿಹಾರ ಪಡೆದಿದ್ದಾರೆ. ಇದರಿಂದ ನೈಜ ರೈತರಿಗೆ ಅನ್ಯಾಯವಾದ ಬಗ್ಗೆ ದೂರು ಬಂದಿದೆ. ಈ ಕುರಿತು ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

