Advertisement
MIRROR FOCUS

ಕಲಬುರಗಿಯ ಬಹುತೇಕ ಕಡೆ ಮಣ್ಣಿನ ಒಳಪದರದಲ್ಲಿ ಹೆಚ್ಚಿರುವ ಸುಣ್ಣದ ಕಲ್ಲು

Share

ಪ್ರಾಕೃತಿಕವಾಗಿ ಕಲಬುರಗಿ ಜಿಲ್ಲೆಯ ಬಹುತೇಕ ನೆಲದ ಒಳ ಪದರದಲ್ಲಿ ಸುಣ್ಣದ ಕಲ್ಲು ಒಳಗೊಂಡಿರುವ ಹಿನ್ನಲೆಯಲ್ಲಿ ಇಲ್ಲಿನ ಮಣ್ಣಿಗೆ ಅತಿ ನೀರು ಅಪಾಯಕಾರಿ ಎಂದು ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ  ಅತಿವೃಷ್ಠಿಯಿಂದ ತೊಗರಿ, ಹತ್ತಿ ಹಾಗೂ ಇತರೆ ಬೆಳೆಗೆ ಬರಬಹುದಾದ ಕೀಟ ರೋಗ ಬಾಧೆ ಹಾಗೂ ಅದರ ನಿರ್ವಹಣೆಯ ಕುರಿತು ವಿವರಿಸಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ನಮ್ಮ ಈ ನೆಲದ ಮಣ್ಣು ಒಂದು ಮಳೆಗೆ 84 ದಿನ ತೇವಾಂಶ ಹಿಡಿದಿಡುವ ಶಕ್ತಿ ಹೊಂದಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 2025 ನೇ ಸಾಲಿನ ಜನವರಿ  ಯಿಂದ ಸೆಪ್ಟೆಂಬರ್ ವರೆಗೆ ಈ 9 ತಿಂಗಳಲ್ಲಿ ವಾಡಿಕೆಯಂತೆ 609 ಮಿ.ಮೀ ಮಳೆಯಾಗಬೇಕಾಗಿದ್ದು, 900 ಮಿ.ಮೀ ಎಂದರೆ ಶೇ 48% ರಷ್ಟು ಹೆಚ್ಚು ಮಳೆಯಾಗಿದೆ. ಜಿಲ್ಲೆಯ ಒಟ್ಟು 11 ತಾಲ್ಲೂಕುಗಳಲ್ಲಿ ಚಿಂಚೋಳಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಕಾಳಗಿ ವಾಡಿಕೆಯಂತಾಗಿದೆ, ಉಳಿದ 9 ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಅದರಲ್ಲೂ ಕಳೆದ ಮೇ ತಿಂಗಳಿನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹೊಲಗಳಲ್ಲಿ ನೀರು ನಿಲ್ಲುವ ಮೂಲಕ ಬೆಳೆಗಳಿಗೆ ಅನೇಕ ರೋಗಗಳು ಭಾದಿಸುತ್ತಿರುವುದು ರೈತರಿಗೆ ಸಂಕಷ್ಟ ತಂದಿದೆ ಎಂದರು. ಮುಂಬರುವ ಹಿಂಗಾರು ಬೆಳೆಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಇಲಾಖೆವತಿಯಿಂದ ಮುಂದಿನ ಅಕ್ಟೋಬರ್ ಮಾಹೆಯ 3 ರಿಂದ 18 ರ ವರೆಗೆ “ವಿಕಸಿತ ಕೃಷಿ ಸಂಕಲ್ಪಅಭಿಯಾನವನ್ನು” ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

5 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

6 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

6 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

6 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

22 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

23 hours ago