ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

March 17, 2025
6:30 AM

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು  2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95,000 ಮೇಕೆಗಳು ಜಿಲ್ಲೆಯಲ್ಲಿದೆ  ಎಂದು ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಜಗದೀಶ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯವನ್ನು ಎ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 50 ರಷ್ಟು, ಬಿ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 75 ರಷ್ಟು ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರತಿ ಐದು ವರ್ಷಕ್ಕೊಮ್ಮೆ ಜಾನುವಾರು ಸಮೀಕ್ಷೆ ನಡೆಸಲಾಗುತ್ತದೆ. 2019 ರಲ್ಲಿ ನಡೆದ ಸಮೀಕ್ಷೆಯ ಪ್ರಕಾರ 3.03 ಕೋಟಿ ಜಾನುವಾರುಗಳು ಇದ್ದವು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror