21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95,000 ಮೇಕೆಗಳು ಜಿಲ್ಲೆಯಲ್ಲಿದೆ ಎಂದು ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಜಗದೀಶ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯವನ್ನು ಎ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 50 ರಷ್ಟು, ಬಿ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 75 ರಷ್ಟು ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರತಿ ಐದು ವರ್ಷಕ್ಕೊಮ್ಮೆ ಜಾನುವಾರು ಸಮೀಕ್ಷೆ ನಡೆಸಲಾಗುತ್ತದೆ. 2019 ರಲ್ಲಿ ನಡೆದ ಸಮೀಕ್ಷೆಯ ಪ್ರಕಾರ 3.03 ಕೋಟಿ ಜಾನುವಾರುಗಳು ಇದ್ದವು.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…