Advertisement
ಸುದ್ದಿಗಳು

ಕೊರೋನಾ ಲಾಕ್ಡೌನ್‌ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗಿಸಬಾರದು – ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ

Share

ಕೊರೋನಾ ಲಾಕ್ಡೌನ್‌ ಜಾರಿಗಾಗಿ ಹಾಗೂ ಕೊರೋನಾ ಮಾರ್ಗಸೂಚಿಗಳ ಅನುಷ್ಟಾನಕ್ಕಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗ ಮಾಡಬಾರದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಬಲಪ್ರಯೋಗ ಸೇರಿದಂತೆ ಕೊರೋನ ಸಂಬಂಧದ  ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠ, ಲಾಕ್ಡೌನ್ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲ ಪ್ರಯೋಗಿಸಬಾರದು ಎಂದು ಸೂಚಿಸಿದೆ.

ಈ ನಡುವೆ ಲಾಕ್ಡೌನ್‌ ಸಂದರ್ಭದಲ್ಲಿ  ಯಾವುದೇ ವಾಹನಗಳು ಓಡಾಟ ನಡೆಸಬಾರದು ಎಂಬ ನಿಯಮವನ್ನು ಮೀರಿ ರಸ್ತೆಗೆ ಇಳಿದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 19,949 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಮೇ 10 ರಿಂದ ಪ್ರಾರಂಭವಾದ ಲಾಕ್ಡೌನ್‌ ಮೇ.  24  ರವರೆಗೆ ಇರಲಿದೆ. ನಿಯಮದ ಪ್ರಕಾರ ಅಲ್ಲಿಯವರೆಗೂ ವಾಹನಗಳು ರಸ್ತೆಗೆ ಇಳಿದರೆ ಪೊಲೀಸ್‌ ವಶವಾಗಲಿದೆ.

ದ ಕ ಜಿಲ್ಲೆಯಲ್ಲಿ  ಮಂಗಳವಾರ ಕೋವಿಡ್‌ ನಿಯಮ ಉಲ್ಲಂಘನೆಯ ಒಂದು ಪ್ರಕರಣ ದಾಖಲಾಗಿದ್ದರೆ ಮಾಸ್ಕ್‌ ಧರಿಸದ 291 ಪ್ರಕರಣಗಳಲ್ಲಿ  ದಂಡ ವಿಧಿಸಲಾಗಿದ್ದು ಒಟ್ಟು 63  ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದ ಕ ಜಿಲ್ಲಾ ಪೊಲೀಸ್‌ ಪ್ರಕಟಣೆ ತಿಳಿಸಿದೆ.    

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

13 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

13 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

13 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

16 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago