ಲೋಕಸಭೆ ಚುನಾವಣಾ(Lok Sabha Election 2024) ದಿನಾಂಕವನ್ನು ಮಾ.16ರಂದು 3 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ಪ್ರಕಟಣೆಯನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ ಎಂದು ಹೇಳಿದೆ.
ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಇಂದು ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ. ಏಪ್ರಿಲ್/ಮೇ ತಿಂಗಳಲ್ಲಿ ಮತದಾನ ನಡೆಯಲಿರುವ ನಾಲ್ಕು ರಾಜ್ಯಗಳೆಂದರೆ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ, ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಇದನ್ನೂ ಕೂಡಾ ಗಮನಿಸಿಕೊಂಡು ತಯಾರಿ ನಡೆಸಲಿದೆ. ವರದಿಗಳ ಪ್ರಕಾರ, ಆಯೋಗವು ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ಕಾರ್ಯನಿರತವಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel