ರಾಜ್ಯದಲ್ಲಿ ಎನ್‌ಡಿಎ “ಕೈ” ಹಿಡಿದ ಮತದಾರರು | ದೇಶದಲ್ಲಿ “ಕೂಡಿ” ಆಳುವ ಆಡಳಿತ..! |

June 4, 2024
9:05 PM
ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಜೆಡಿಎಸ್ 2 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಜೆಡಿಎಸ್ 2 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ದೇಶದಲ್ಲಿ ಇದುವರೆಗಿನ ಮಾಹಿತಿ ಪ್ರಕಾರ ಒಟ್ಟು 543 ಸ್ಥಾನಗಳ ಪೈಕಿ NDA ಮೈತ್ರಿಕೂಟ 294 , INDIA 231 ಹಾಗೂ  ಇತರರು 18 ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 2019 ರಲ್ಲಿ NDA ಮೈತ್ರಿಕೂಟ 362 ಸ್ಥಾನ ಹಾಗೂ ಕಾಂಗ್ರೆಸ್‌ ಒಕ್ಕೂಟ 120  ಸ್ಥಾನಗಳನ್ನು ಪಡೆದಿತ್ತು.ಇದೀಗ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಬಹುಮತ ಪಡೆದಿದೆ , ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿದೆ.

ಎನ್‌ಡಿಎ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲು ಮುಂದಾಗಿದ್ದು,ಕನಿಷ್ಠ 294 ಸ್ಥಾನಗಳನ್ನು ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ಎಕ್ಸ್‌ ಮೂಲಕ ಸಂದೇಶ ನೀಡಿ, ” ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನರಿಗೆ  ನಮಸ್ಕರಿಸುತ್ತೇನೆ ಮತ್ತು ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಭರವಸೆ ನೀಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಕಾಂಗ್ರೆಸ್‌ ನಾಯಕ  ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, ಇಂದಿನ ಜನಾದೇಶವು, ದೇಶದ ಜನರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಬಯಸುವುದಿಲ್ಲ ಎಂಬುದಕ್ಕೆ ಸ್ಪಷ್ಟ ಸೂಚನೆಯಾಗಿದೆ ಎಂದು ಹೇಳಿದರು.

 

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು
December 17, 2025
7:02 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror