ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಜೆಡಿಎಸ್ 2 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ದೇಶದಲ್ಲಿ ಇದುವರೆಗಿನ ಮಾಹಿತಿ ಪ್ರಕಾರ ಒಟ್ಟು 543 ಸ್ಥಾನಗಳ ಪೈಕಿ NDA ಮೈತ್ರಿಕೂಟ 294 , INDIA 231 ಹಾಗೂ ಇತರರು 18 ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 2019 ರಲ್ಲಿ NDA ಮೈತ್ರಿಕೂಟ 362 ಸ್ಥಾನ ಹಾಗೂ ಕಾಂಗ್ರೆಸ್ ಒಕ್ಕೂಟ 120 ಸ್ಥಾನಗಳನ್ನು ಪಡೆದಿತ್ತು.ಇದೀಗ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಬಹುಮತ ಪಡೆದಿದೆ , ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿದೆ.
ಎನ್‌ಡಿಎ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲು ಮುಂದಾಗಿದ್ದು,ಕನಿಷ್ಠ 294 ಸ್ಥಾನಗಳನ್ನು ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ಎಕ್ಸ್ ಮೂಲಕ ಸಂದೇಶ ನೀಡಿ, ” ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನರಿಗೆ ನಮಸ್ಕರಿಸುತ್ತೇನೆ ಮತ್ತು ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಭರವಸೆ ನೀಡುತ್ತೇನೆ” ಎಂದು ಅವರು ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, ಇಂದಿನ ಜನಾದೇಶವು, ದೇಶದ ಜನರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಬಯಸುವುದಿಲ್ಲ ಎಂಬುದಕ್ಕೆ ಸ್ಪಷ್ಟ ಸೂಚನೆಯಾಗಿದೆ ಎಂದು ಹೇಳಿದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…