2024ರ ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ | ಜೂನ್ 4ಕ್ಕೆ ಮತಎಣಿಕೆ

March 16, 2024
4:26 PM

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ 2024ರ ಲೋಕಸಭಾ ಚುನಾವಣೆಗೆ (Lok Sabha election 2024) ಇದೀಗ ಮುಹೂರ್ತ (Election Date) ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ (Rajiv Kumar) ಸುದ್ದಿಗೋಷ್ಠಿ ನಡೆಸಿ, ಲೋಕಸಭಾ ಚುನಾವಣೆಯ ದಿನಾಂಕ ಘೋಷಿಸಿದ್ದಾರೆ.  ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಜೂನ್ 4ಕ್ಕೆ ಮತಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇನ್ನು ಕರ್ನಾಟಕದಲ್ಲಿ ಎಲೆಕ್ಷನ್ (Karnataka Lok Sabha Election) ಯಾವಾಗ? ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯುತ್ತೆ? ಈ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಉತ್ತರ ನೀಡಿದೆ. ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.

ಕಳೆದ ಬಾರಿ ಯಾವಾಗ ಮತದಾನ ನಡೆದಿತ್ತು? : ಕಳೆದ ಬಾರಿ ಕರ್ನಾಟಕದಲ್ಲಿ (Karnataka Lok Sabha Election 2024) ಎರಡು ಹಂತದಲ್ಲಿ ಮತದಾನ ನಡೆದಿತ್ತು. ಏ.18 ರಂದು 14 ಕ್ಷೇತ್ರಗಳಿಗೆ ಹಾಗೂ ಏ.23 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

  • ಅಂತರ್ಜಾಲ ಮಾಹಿತಿ

Lok Sabha Election 2024 Date 19 April 2024: The Election Commission of India announced on Saturday that Lok Sabha elections will be held in 7 phases. Counting for all elections, including by-elections, assembly elections, and general elections, is slated for June 4. The current government’s term is ending on June 16.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆನೆ ದಾಳಿ | ಅರಣ್ಯ ಸಚಿವರ ಸೂಚನೆ
December 17, 2025
9:44 PM
by: ದ ರೂರಲ್ ಮಿರರ್.ಕಾಂ
2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror