MIRROR FOCUS

ಲೋಕಸಭೆ ಚುನಾವಣೆ ಹಿನ್ನೆಲೆ | ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ| ಪ್ರಧಾನಮಂತ್ರಿ ಕಿಸಾನ್ ಯೋಜನೆಯಲ್ಲಿ ಭಾರಿ ಬದಲಾವಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಸರ್ಕಾರ(Central Govt) ರೈತರಿಗಾಗಿ(Farmer) ಅನೇಕ ಯೋಜನೆಗಳನ್ನು(Plans) ಆರಂಭಿಸಿದೆ. ಅದರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ(PM kisan yojana) ಕೂಡ ಒಂದು. ಇದರಿಂದ ಅನೇಕ ರೈತರಿಗೆ ಸಹಾಯವಾಗಿರುವುದು ನಿಜ.‌ ಈಗ ಈ ಯೋಜನೆಯಡಿ ಬರುವ ಹಣವನ್ನು(Money)ಶೇಕಡಾ 50 ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆಯಂತೆ. ಈ ಯೋಜನೆಯನ್ನು ಫೆಬ್ರವರಿ 2019 ರಲ್ಲಿ ಜಾರಿಗೆ ತರಲಾಯಿತು. ಈ ಯೋಜನೆಯಡಿ ಅರ್ಹ ರೈತರಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು(Financial support) ನೀಡುತ್ತಿದೆ.

Advertisement

ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ವರ್ಷ ಮೂರು ಕಂತುಗಳಲ್ಲಿ 6000 ರೂ ಬೆಳೆ ಸಹಾಯವನ್ನು ನೀಡಲಾಗುತ್ತಿದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಡಿಸೆಂಬರ್-ಮಾರ್ಚ್ ಅವಧಿಯಲ್ಲಿ ಕೇಂದ್ರವು ನೇರವಾಗಿ ರೈತರ ಖಾತೆಗಳಿಗೆ ಈ ಆರ್ಥಿಕ ನೆರವನ್ನು ಜಮಾ ಮಾಡುತ್ತಿದೆ. ಪ್ರತಿ ಕಂತಿನಲ್ಲಿ ರೈತರ ಖಾತೆಗೆ 2 ಸಾವಿರ ರೂಪಾಯಿ ಸೇರುತ್ತೆ. ಇತ್ತೀಚೆಗೆ ಪ್ರಧಾನ ಮಂತ್ರಿ ಕಿಸಾನ್ 15 ನೇ ಕಂತಿನ ಹಣವನ್ನು ಅರ್ಹ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ. ಈಗ ರೈತರೆಲ್ಲ 16ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಈ ವೇಳೆ ಕೇಂದ್ರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ತಯಾರು ಮಾಡಿದೆಯಂತೆ.

2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಪಿಎಂ-ಕಿಸಾನ್ ಯೋಜನೆಯಲ್ಲಿ ಒಂದಷ್ಟು ಬದಲಾವಣೆ ತರಲು ಉದ್ದೇಶಿಸಿರುವ ಸರ್ಕಾರ, ಫೆ.1ರಂದು ಮಂಡಿಸಲಿರುವ ಮಧ್ಯಂತರ ಬಜೆಟ್ ನಲ್ಲಿ ರೈತರಿಗೆ ಸಂತಸದ ಸುದ್ದಿ ನೀಡಲು ಮುಂದಾಗಿರುವಂತಿದೆ. ಪಿಎಂ ಕಿಸಾನ್‌ನ ಹೂಡಿಕೆಯನ್ನು ಹೆಚ್ಚಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಯೋಜನೆಯಡಿ ರೈತರಿಗೆ ಶೇ.50ರಷ್ಟು ಲಾಭವನ್ನು ಹೆಚ್ಚಿಸಲಾಗುವುದು. ಅಂದರೆ ರೂ. 6000 ರಿಂದ ರೂ. 9000ಕ್ಕೆ ಏರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

 

ಈ ಒಂಬತ್ತು ಸಾವಿರ ರೂಪಾಯಿಯನ್ನು ಎಂದಿನಂತೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಅಂದರೆ ಪ್ರತಿ ಕಂತಿನಲ್ಲಿ 3 ಸಾವಿರ ರೂಪಾಯಿ ನೀಡಲು ಮುಂದಾಗಿದ್ದಾರೆ. ಇದಲ್ಲದೇ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ಬೆಂಬಲ ಬೆಲೆಯ ಹಣ ಹೆಚ್ಚಳ ವಿಚಾರದಲ್ಲಿ ರೈತರಿಗೆ ಸಿಹಿ ಮಾತು ಕೇಳಿ ಬರಲಿದೆ ಎಂದು ವರದಿಯಾಗಿದೆ. ಫೆಬ್ರವರಿ ಅಂತ್ಯದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಪಿಎಂ ಕಿಸಾನ್‌ನ 16 ನೇ ಕಂತು ಬಿಡುಗಡೆ ಮಾಡಲು ಸರ್ಕಾರ ನಿರೀಕ್ಷಿಸುತ್ತದೆ. ಎಲ್ಲಾ ಅರ್ಹ ರೈತರು ಇದರೊಳಗೆ ಇ-ಕೆವೈಸಿ ಪೂರ್ಣಗೊಳಿಸಬೇಕು. ನಿಮ್ಮ ಇ-ಕೆವೈಸಿಯನ್ನು ನೀವು ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಬೇಕು.

ಪಿಎಂ ಕಿಸಾನ್‌ಗೆ ಸಂಬಂಧಿಸಿದಂತೆ ನಿಮ್ಮ ಖಾತೆಗಳಿಗೆ ಹಣ ಜಮೆಯಾಗದಿದ್ದರೆ, ತಕ್ಷಣ ಸಹಾಯವಾಣಿ ಸಂಖ್ಯೆಗೆ ದೂರು ನೀಡಿ. PM ಕಿಸಾನ್ ಯೋಜನೆ ಸಹಾಯವಾಣಿ ಸಂಖ್ಯೆ 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092. ಈ ಸಂಖ್ಯೆಗಳನ್ನು ಸಂಪರ್ಕಿಸಿದರೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ.

  • ಅಂತರ್ಜಾಲ ಮಾಹಿತಿ
The central government has decided to increase the money under Pradhan Mantri Kisan Yojana by 50 percent. The scheme was implemented in February 2019. Under this scheme, the central government is providing financial support to the eligible farmers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

13 hours ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

13 hours ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

1 day ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

1 day ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

1 day ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago