ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸರು (Bellary Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಖಲೆ ಇಲ್ಲದ 5.60 ಕೋಟಿ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳನ್ನ (Gold and Silver Jewellery) ಜಪ್ತಿ ಮಾಡಲಾಗಿದೆ.
ಬಳ್ಳಾರಿಯ (Bellary) ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂಬಳಿ ಬಜಾರ್ನಲ್ಲಿರುವ ಹೇಮಾ ಜ್ಯೂವೆಲರಿ ಶಾಪ್ ಮಾಲೀಕರ ಮನೆಯಲ್ಲಿ ಹಣ, ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟು 5.60 ಕೋಟಿ ರೂ. ನಗದು, 3 ಕೆಜಿ ಬಂಗಾರ 103 ಕೆಜಿ ಬೆಳ್ಳಿ ಆಭರಣ, 21 ಕೆಜಿ ಕಚ್ಚಾ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ನಗದು ಹವಾಲಾಕ್ಕೆ ಸಂಬಂಧಿಸಿದ ಹಣ ಎನ್ನಲಾಗಿದೆ. ಪ್ರಕರಣ ಸಂಬಂಧ ಆರೋಪಿ ನರೇಶ್ ಎಂಬಾತನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel