Advertisement
ಸುದ್ದಿಗಳು

ಚುನಾವಣಾ ಕಣ | ಕೇಂದ್ರದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರ ಹಿಡಿಯುವುದು ಅಸಾಧ್ಯ | ಎಚ್‌.ಡಿ.ದೇವೇಗೌಡ

Share

ಲೋಕಸಮರ(Lok Sabha Election) ದಿನದಿಂದ ದಿನಕ್ಕೆ ಕಾವೇರುತ್ತಿದೆ. ಜೆಡಿಎಸ್‌(JDS) ಏಕಾಂಗಿಯಾಗಿ ಚುನಾವಣೆ(Election) ಎದುರಿಸುತ್ತಿತ್ತು. ಈ ಬಾರಿ ಬಿಜೆಪಿಯೊಂದಿಗೆ(BJP) ಮೈತ್ರಿ ಮಾಡಿಕೊಂಡು ಗೆಲುವಿಗಾಗಿ ಬಿಜೆಪಿ ಜೊತೆ ಶ್ರಮಿಸುತ್ತಿದೆ. ಈ ಮಧ್ಯೆ ದೇಶದ ಮೂರು ರಾಜ್ಯಗಳಲ್ಲಷ್ಟೇ ಅಧಿಕಾರದಲ್ಲಿರುವ ಕಾಂಗ್ರೆಸ್(Congress), ಕೇಂದ್ರದಲ್ಲಿ(Central) ಅಧಿಕಾರ ಹಿಡಿಯುವುದು ಅಸಾಧ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (H.D.Deve Gowda) ಭವಿಷ್ಯ ನುಡಿದರು.

ಹಾಸನದ ನಾಗರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. 28 ಗ್ಯಾರೆಂಟಿಗಳನ್ನು ದೇಶದಲ್ಲಿ ಜಾರಿಗೆ ತರ್ತೀವಿ ಅಂತ ಹೇಳಿದ್ದಾರೆ. ಮೂವತ್ತು ಲಕ್ಷ ಜನಕ್ಕೆ ಕೆಲಸ ಕೊಡ್ತೀವಿ ಎಂದಿದ್ದಾರೆ. ಆದರೆ ದೇಶದಲ್ಲಿ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದಲ್ಲಿ ಮಾತ್ರ ಅವರ ಅಧಿಕಾರ ಇದೆ. ಇಂಥವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಎಲ್ಲಾ ರೀತಿಯ ಸಾಲಮನ್ನಾ ಮಾಡ್ತೀವಿ ಎಂದಿದ್ದಾರೆ. ಮೋದಿ ಅವರಿಂದ ಹೆಣ್ಣುಮಕ್ಕಳಿಗೆ 33 ಪರ್ಸೆಂಟ್ ಮೀಸಲಾತಿ ಮಸೂದೆ ಪಾಸ್ ಆಯ್ತು. ಇದನ್ನು ನಾನು ಮಾಡಿದ್ದು. ಅದನ್ನು ಪಾಸ್ ಮಾಡಿದ್ದಾರೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಜನರಿಗೆ ಮೋಸ ಮಾಡಲು ಸಾಧ್ಯನಾ? ಎಲ್ಲಾ ಸಾಲ ಮನ್ನಾ ಮಾಡಲು ಎಲ್ಲಿದೆ ಬಜೆಟ್? ಕೇಂದ್ರದ ಬಜೆಟ್‌ನ ನಾಲ್ಕು ಪಟ್ಟು ಭರವಸೆ ಪ್ರಣಾಳಿಕೆಯಲ್ಲಿದ್ದು, ಈಡೇರಿಸಲು ಅಷ್ಟು ಹಣ ಕೂಡಿಸುವುದು ಹೇಗೆ ಎಂದು ಕೇಳಿದರು.

ಎಂಟು ಸಾವಿರ ಕೋಟಿ ಮನೆ ಕಟ್ಟಿಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ. ಅಧಿಕಾರದಲ್ಲಿದ್ದಾಗ ಏನೇನು ಮಾಡಿದ್ದೀರಾ? ಮನಮೋಹನ್‌ ಸಿಂಗ್ ಪಿಎಂ ಆದಾಗ ಎಷ್ಟು ಹಗರಣ ಆಯ್ತು ಎಂದು ಪ್ರಶ್ನಿಸಿದರು. ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಮಾತನಾಡಿ, ಇದು ಸತ್ಯಕ್ಕೆ ದೂರವಾದ ಪ್ರಣಾಳಿಕೆ. ಇದರಿಂದ ನಿಮಗೆ ಏನೇನು ಆಗಲ್ಲ. ಇದರಿಂದ ನೀವು ಯಾವ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಈ ಪ್ರಣಾಳಿಕೆಯನ್ನು ಜನ ಓದ್ತಾರೆ. ಆದರೆ ನಂಬಲ್ಲ ಎಂದು ‘ಕೈ’ ನಾಯಕರಿಗೆ ತಿರುಗೇಟು ನೀಡಿದರು.

ಮೊನ್ನೆ ಮೋದಿಯವರ ಬಳಿ ಕೊಬ್ಬರಿ ಬೆಲೆ ಬಿದ್ದು ಹೋಯ್ತು ಅಂದೆ. ಅವರು ನನ್ನನ್ನು ತಬ್ಬಿಕೊಂಡು ಕೂರಿಸಿದರು. ಕೂಡಲೇ ಕೊಬ್ಬರಿ ಖರೀದಿಗೆ ಆದೇಶ ನೀಡಿದರು.

  • ಅಂತರ್ಜಾಲ ಮಾಹಿತಿ

Speaking at the JDS election campaign meeting in Nagarahalli village of Hassan, he said that the Congress had released a manifesto yesterday. He said that 28 guarantees will be implemented in the country. They said that they will give jobs to thirty lakh people. But in the country they have power only in Karnataka, Telangana, Himachal Pradesh. He questioned whether such people can come to power at the centre.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

3 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

8 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

9 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

11 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

12 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago