ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ ವೈವಾಹಿಕ ಜೀವನ ಅಂತ್ಯಕ್ಕೆ ಅರ್ಜಿ ಹಾಕಿದ್ದ ಎಂಟು ಜೊಡಿಗಳು ಒಂದಾಗಿವೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳನ್ನು ಒಳಗೊಂಡ ಒಟ್ಟು 31 ನ್ಯಾಯಾಲಯಗಳಲ್ಲಿ ಜರುಗಿದ ಲೋಕ ಅದಾಲತ್ ನಲ್ಲಿ ಒಟ್ಟು 11 ಸಾವಿರದ 634 ಪ್ರಕರಣಗಳು ಇತ್ಯರ್ಥಗೊಂಡಿವೆ. ದಾವಣಗೆರೆ ಜಿಲ್ಲೆಯ 22 ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 10 ಸಾವಿರದ 186 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ . ಕೋಲಾರ ಜಿಲ್ಲೆಯ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ 10 ಸಾವಿರ ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ . ಜೊತೆಗೆ ನ್ಯಾಯಾಲಯದಲ್ಲಿದ್ದ ಸುಮಾರು40 ಸಾವಿರ ವ್ಯಾಜ್ಯ ಪೂರ್ವ ಪ್ರಕರಣಗಳು ರಾಜಿ ಮೂಲಕ ಮುಕ್ತಯಗೊಂಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel