ಭ್ರಷ್ಟಾಚಾರ ಕಂಡುಬಂದರೆ ಲೋಕಾಯುಕ್ತರಿಗೆ ದೂರು ಸಲ್ಲಿಸುವಂತೆ ಲೋಕಾಯುಕ್ತ ಎಸ್ಪಿ ಮನವಿ |

September 26, 2022
5:46 PM

ಸರ್ಕಾರದ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ನೇರವಾಗಿ ಲೋಕಾಯುಕ್ತರಿಗೆ ದೂರು ಸಲ್ಲಿಸುವಂತೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಮಂಗಳೂರು ಹಾಗೂ ಉಡುಪಿ ವಿಭಾಗದ ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ಅವರು ತಿಳಿಸಿದರು.

Advertisement
Advertisement

ಸೆ.26 ರ ಸೋಮವಾರ ಮಂಗಳೂರು ನಗರದ ಉರ್ವಾಸ್ಟೋರ್ ಹತ್ತಿರದಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದರೆ ಅಥವಾ ಗಳಿಕೆಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದರೆ ಅವರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರ ಕರ್ನಾಟಕ ಲೋಕಾಯುಕ್ತವನ್ನು 2022ರ ಸೆ.9ರಿಂದ ಮತ್ತಷ್ಟು ಬಲಿಗೊಳಿಸುವುದರೊಂದಿಗೆ, ಪೊಲೀಸ್ ಠಾಣಾ ಅಧಿಕಾರದ ಜೊತೆಗೆ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಹೆಚ್ಚಿನ ಕೆಲಸ ಮಾಡುವ ಅಧಿಕಾರ ನೀಡಿದೆ. ಯಾರಾದರೂ ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ, ಅಕ್ರಮ ಆಸ್ತಿ ಗಳಿಕೆ, ಅಧಿಕಾರ ದುರ್ಬಳಕೆ ಅಥವಾ ಕೆಲಸ ಮಾಡಿಕೊಡಲು ಹಣ ಕೇಳುತ್ತಿರುವ ಬಗ್ಗೆ ದೂರು ಬಂದರೆ ಅವರು ಆ ವ್ಯಕ್ತಿಯ ವಿರುದ್ಧ ದೂರು ನೀಡಿದರೆ ಅವರ ವಿರುದ್ಧ ತನಿಖೆ ಆರಂಭಿಸಿಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಲೋಕಾಯುಕ್ತ ಮಂಗಳೂರು ವಿಭಾಗ ಎಂದರೆ ಮಂಗಳೂರು ಹಾಗೂ ಉಡುಪಿ ಜಿಲ್ಲೆ ಎರಡು ಜೊತೆಗೂಡುತ್ತದೆ. ಈಗಾಗಲೇ ಎಸಿಬಿ ಯಲ್ಲಿರುವ ಹಳೆಯ ಪ್ರಕರಣಗಳನ್ನು ಲೋಕಯುಕ್ತಕ್ಕೆ ವರ್ಗಾವಣೆ ಮಾಡುವ ಕಾರ್ಯ ನಡೆಯುತ್ತಿದೆ. ವರ್ಗಾವಣೆಯಾದ ಬಳಿಕ ಇರುವ ಪ್ರಕರಣಗಳ ವಿರುದ್ಧ ತನಿಖೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈಗಾಗಲೇ ಮಂಗಳೂರು ವಿಭಾಗದಲ್ಲಿ 2 ಡಿವೈಎಸ್ಪಿ ಹಾಗೂ 1 ಇನ್ಸ್ಪೆಕ್ಟರ್ ಹುದ್ದೆ ಇದ್ದರೆ 1 ಇನ್ಸ್ ಪೆಕ್ಟರ್ ಹಾಗೂ 6 ಪಿಸಿ ಗಳ ಹುದ್ದೆಗಳು ಖಾಲಿ ಉಳಿದಿದೆ. ಉಡುಪಿಯಲ್ಲಿ 1 ಡಿವೈಎಸ್ಪಿ ಹಾಗೂ 1 ಇನ್ಸ್ಪೆಕ್ಟರ್ ಹುದ್ದೆ ಇರುತ್ತದೆ. ಇದರಲ್ಲಿ 1 ಇನ್ಸ್ ಪೆಕ್ಟರ್ ಹುದ್ದೆ ಖಾಲಿಯಿದೆ. ಈ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು.

ಲೋಕಾಯುಕ್ತಕ್ಕೆ ಈಗ ಹೆಚ್ಚಿನ ಅಧಿಕಾರ ನೀಡಿರುವ ಜೊತೆಗೆ ಪಿಸಿ ಕಾಯಿದೆ (ಭ್ರಷ್ಟಾಚಾರ ನಿರ್ಮೂಲನಾ ಕಾಯಿದೆ)ಯ ಹೊಣೆಗಾರಿಕೆ ಕೂಡ ಲೋಕಾಯುಕ್ತಕ್ಕೆ ದೊರಕಿದೆ. ಇನ್ನುಳಿದಂತೆ ಪೆÇಲೀಸ್ ಠಾಣೆಯ ರೀತಿಯಲ್ಲಿ ಲೋಕಾಯುಕ್ತ ಇನ್ನು ಮುಂದೆ ಕಾರ್ಯಾಚರಣೆಯನ್ನು ನಡೆಸುತ್ತದೆ. ಭ್ರಷ್ಟಾಚಾರದ ವಿರುದ್ದ ದೂರು ನೀಡಿದರೆ ಅದರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಎಸಿಬಿಗಿಂತ ಮೊದಲು ಲೋಕಾಯುಕ್ತ ಅಧಿಕಾರದಲ್ಲಿದ್ದಾಗ ಮಂಗಳೂರು ವಿಭಾಗ 12 ಪ್ರಕರಣಗಳಿಗೆ ಶಿಕ್ಷೆ ವಿಧಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಲೋಕಾಯುಕ್ತದ ಉಡುಪಿ ಡಿವೈಎಸ್ಪಿ ಜಗದೀಶ್, ಮಂಗಳೂರು ಡಿವೈಎಸ್ಪಿ ಚಲುವರಾಜು, ಕಲಾವತಿ, ಉಡುಪಿ ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಹಾಗೂ ಮಂಗಳೂರು ಪೊಲೀಸ್ ನಿರೀಕ್ಷಕ ಎನ್. ಅಮಾನುಲ್ಲಾ ಸುದ್ದಿಗೋಷ್ಠಿಯಲ್ಲಿದ್ದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ
May 19, 2025
11:35 AM
by: ಸಾಯಿಶೇಖರ್ ಕರಿಕಳ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |
May 19, 2025
10:15 AM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಬುಧ ಮತ್ತು ಸೂರ್ಯನಿಂದ ರಾಜಯೋಗ ಪ್ರಾರಂಭವಾಗುತ್ತದೆ
May 19, 2025
7:07 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group