ಜು. 19 ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

July 15, 2022
10:19 AM

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜು.19‌ ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.

ಜು.19ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ, ಜು.20ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಹಾಗೂ ಜು.21ರ ಗುರುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಳ್ಳಾಲ ತಾಲೂಕಿನ ನಗರಸಭಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಉಳಿದಂತೆ ಇತರೆ ದಿನಗಳಲ್ಲಿಯೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು, ದೂರುಗಳನ್ನು ನೀಡಬಹುದು.

ಅರ್ಜಿದಾರರು ನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿರುವ ಬಹು ಮಹಡಿ ಕಟ್ಟಡದ ಲೋಕಾಯುಕ್ತ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0824-2950997, 9243456629, ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂ.ಸಂಖ್ಯೆ:0824-2453420, 9448635348, ಪೊಲೀಸ್ ಉಪಾಧೀಕ್ಷಕರ-2 ಕಚೇರಿ ದೂ.ಸಂಖ್ಯೆ:0824-2453420, 7019967061, ಪೊಲೀಸ್ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0824-2427237, 9448461816 ಮೂಲಕ ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror