ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.
ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ ಕೊಳೆ, ಡೌಣಿ ರೋಗ ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ, ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ ಶಂಕರಗೌಡ ಹೇಳುತ್ತಾರೆ.
ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ, ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ ಹೇಳುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel