ಕೊಪ್ಪಳದಲ್ಲಿ ಮಳೆಯಿಂದ ದ್ರಾಕ್ಷಿ ಬೆಳೆ ನಾಶ | ಸಂಕಷ್ಟಕ್ಕೆ ಸಿಲುಕಿದ ರೈತರು

October 18, 2024
6:39 AM
ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ ಲಕ್ಷ್ಮಣ ಬಡಿಗೇರ್.

ಕೊಪ್ಪಳ ಜಿಲ್ಲೆಯಲ್ಲಿ  ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.   ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.

ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ  ಕೊಳೆ, ಡೌಣಿ ರೋಗ  ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ,  ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ  ಶಂಕರಗೌಡ ಹೇಳುತ್ತಾರೆ.

ಅಕಾಲಿಕ  ಮಳೆಯಿಂದಾಗಿ ಜಿಲ್ಲೆಯಲ್ಲಿ   ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ,  ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ  ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror