ಉತ್ತರ ಕರ್ನಾಟಕದಲ್ಲಿ ಹಲವು ದಿನಗಳಿಂದ ಕಣ್ಣಾಮುಚ್ಚಾಳೆ ಆಡುತ್ತಿದ್ದ ವರುಣ ಈಗ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾನೆ. ಕಳೆದೆರಡು ಮೂರು ದಿನಗಳಿಂದ ಕೆಲ ಜಿಲ್ಲೆಗಳಲ್ಲಿ ಎಡೆ ಬಿಡದೆ ಮಳೆ ಸುರಿತಿದೆ. ಕಲಬುರಗಿಜಿಲ್ಲಾಡಳಿತ ನದಿತೀರದಲ್ಲಿ ಹೈಅಲರ್ಟ್ ಘೋಷಿಸಿದೆ. ನದಿ/ಹಳ್ಳ/ಕೊಳ್ಳ/ಕೆರೆ ದಂಡೆಗೆ ತೆರಳದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.
ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗುರ ಸಾರಿಸಲು ಕಲಬುರಗಿ ಡಿಸಿ ಆದೇಶಿಸಿದ್ದಾರೆ. ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಸರ್ವಸನ್ನದ್ದರಾಗಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಗ್ಗು ಪ್ರದೇಶದ/ನದಿ ಪಾತ್ರದ ಜನರನ್ನ ಸ್ಥಳಾಂತರಿಸಿ ಕಾಳಜಿ ಕೇಂದ್ರ ತೆಗೆಯಬೇಕು. ಈಗಾಗಲೇ ಕಲಬುರಗಿ ಜಿಲ್ಲೆಯಲ್ಲಿ ಕಾಗಿಣಾ ನದಿ, ಭೀಮಾ ನದಿ, ಮುಲ್ಲಮಾರಿ ನದಿ ತುಂಬಿ ಹರಿಯುತ್ತಿದೆ. ವರುಣನ ಅಬ್ಬರದ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ.
ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ಐದು ದಿನಗಳಿಂದ ಸತತ ಮಳೆಯಾಗುತ್ತಿದೆ. ಸತತವಾಗಿ 200 mm, 205 mm, 235 mm ಮಳೆಯ ಪ್ರಮಾಣ ದಾಖಲಾಗಿದೆ. ಕಣಕುಂಬಿಯಲ್ಲಿ ಭಾರೀ ಮಳೆಯಿಂದಾಗಿ ಮಲಪ್ರಭಾ ನದಿಯ ಒಳಹರಿವು ಹೆಚ್ಚಾಗಿದೆ. ಕಣಕುಂಬಿಯಲ್ಲಿ ರಸ್ತೆ, ಬ್ರಿಡ್ಜ್ ಗಳು ಕೊಚ್ಚಿಹೋಗಿವೆ. ಕಣಕುಂಬಿ- ಚಿಗಳೆ ಸೇರಿ ಮೂರು ಗ್ರಾಮಗಳ ಸಂಪರ್ಕ ಬಂದ್ ಆಗುವ ಆತಂಕ ಮುಂದುವರೆದಿದೆ. ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಜುಲೈ 22, ಶನಿವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ, ಚಿಕ್ಕೋಡಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, 14 ಸೇತುವೆಗಳು ಮುಳುಗಡೆಯಾಗಿವೆ. ಇನ್ನೂ ಚಿಕ್ಕೋಡಿಯ ಗ್ರಾಮಗಳಲ್ಲಿ ಪೊಲೀಸರು ಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕೃಷ್ಣಾ, ವೇದಗಂಗಾ, ದೂಧ್ಗಂಗಾ, ಹಿರಣ್ಯಕೇಶಿ, ಘಟಪ್ರಭಾ ನದಿಯ ಒಳಹರಿವು ಹೆಚ್ಚಳವಾಗಿದೆ. ಕೃಷ್ಣಾ ನದಿಗೆ 92 ಕ್ಯೂಸೆಕ್ ನೀರು ಹರಿದು ಬರ್ತಿದೆ.
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 14 ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ, ವೇದಗಂಗಾ, ದೂಧ್ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಒಟ್ಟು 9 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ದೂಧ್ಗಂಗಾಗೆ ಅಡ್ಡಲಾಗಿ ನಿರ್ಮಿಸಿದ ನಿಪ್ಪಾಣಿ ತಾಲೂಕಿನ ಬೋಜ್- ಕಾರದಗಾ, ಮಲಿಕವಾಡ-ದತ್ತವಾಡ, ವೇದಗಂಗಾಗೆ ಅಡ್ಡಲಾಗಿ ನಿರ್ಮಿಸಿದ ಭೋಜವಾಡಿ – ನಿಪ್ಪಾಣಿ, ಕುನ್ನೂರು -ಬಾರವಾಡ, ಸಿದ್ನಾಳ್-ಅಕ್ಕೋಳ, ಭೋಜ್ -ಕುನ್ನೂರು, ಭೀವಶಿ-ಜತ್ರಾಟ ಸೇತುವೆ ಮುಳುಗಡೆಯಾಗಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಚಿಕ್ಕೋಡಿ ತಾಲೂಕಿನ ಮಾಂಜರಿ-ಬಾವನಸೌದತ್ತಿ, ಕಾಗವಾಡ ತಾಲೂಕಿನ ಮಂಗಾವತಿ-ರಾಜಾಪುರ ಸೇತುವೆ, ಹಿರಣ್ಯಕೇಶಿಗೆ ಅಡ್ಡಲಾಗಿ ನಿರ್ಮಿಸಿದ ಹುಕ್ಕೇರಿ ತಾಲೂಕಿನ ಅರ್ಜುನವಾಡಿ -ಕೋಚರಿ, ಅರ್ಜುನವಾಡಿ-ಕುರ್ಣಿ, ಕುರ್ಣಿ-ಕೋಚರಿ ಸೇತುವೆಗಳು ಮುಳುಗಡೆಯಾಗಿವೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…