ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಬಾಂಬೆ ಹೈಕೋರ್ಟ್ ಆದೇಶ |

December 27, 2021
12:35 PM

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್‌ ಆದೇಶ ನೀಡಿದೆ. ಅಕ್ರಮವಾಗಿ ಅಡಿಕೆ ಸಾಗಿಸಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟದ ವಹಿವಾಟು ದಂಧೆಯಲ್ಲಿ ತೊಡಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಹೈಕೋರ್ಟ್‌ ತಿಳಿಸಿದೆ.

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ವ್ಯಾಪಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಆದೇಶಿಸಿದೆ. ಅಂತಹ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಖಡಕ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಶುಕ್ರೆ ಮತ್ತು ಅನಿಲ್ ಪನ್ಸಾರೆ ಅವರ ಪೀಠವು,  2016 ರಲ್ಲಿ ಸಲ್ಲಿಸಲಾದ  ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಸಿಆರ್‌ಪಿಐಎಲ್) ವಿಚಾರಣೆ ನಡೆಸುತ್ತಿದ್ದು,ಈ ಅರ್ಜಿಯಲ್ಲಿ ಮಾರುಕಟ್ಟೆಯಲ್ಲಿ ಕಳಪೆ ಅಡಿಕೆ ಮಾರಾಟವಾಗುತ್ತಿರುವ ವಿಷಯವನ್ನು ಎತ್ತಿ ಹಿಡಿಯಲಾಗಿತ್ತು.

ನಾಗ್ಪುರದಲ್ಲಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟ ಮತ್ತು ಬಳಕೆಯ ಅಕ್ರಮ ವಹಿವಾಟು ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪೀಠವು ಅಸಮಾಧಾನ ವ್ಯಕ್ತಪಡಿಸಿತು. ಇಂತಹ ಕಳಪೆ ಅಡಿಕೆಯು ಮಾನವ ಬಳಕೆಗೆ ಯೋಗ್ಯವಲ್ಲ ಎಂಬ ಅರಿವು ಇದ್ದರೂ ಕ್ರಮವಾಗುತ್ತಿಲ್ಲ ಏಕೆ ಎಂದು ಪೀಠವು ಪ್ರಶ್ನಿಸಿತು.

ಕಳಪೆ ಅಡಿಕೆ ವಿತರಣೆ ಹಾಗೂ ಅಂತಹ ಕೃತ್ಯಗಳು ಮತ್ತು ಅಪರಾಧಗಳಿಗೆ ಸಂಬಂಧಿಸಿದಂತೆ ಸೂಕ್ತ ಪ್ರಕರಣ ದಾಖಲಿಸಿ  ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದರು.

ನಾಗ್ಪುರದ ಪೊಲೀಸ್ ಕಮಿಷನರ್ ಅವರು ಕಾನೂನಿನಲ್ಲಿ ಅನುಮತಿಸಬಹುದಾದ ಕಳಪೆ ಗುಣಮಟ್ಟದ ಅಡಿಕೆ ಆಮದು ಹಾಗೂ ಮಾರಾಟ ಮತ್ತು ಬಳಕೆಯಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧ  ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆಗಳಿಗೆ ಸ್ವಾತಂತ್ರ್ಯ ಇದೆ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ. ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror