Advertisement
MIRROR FOCUS

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಬಾಂಬೆ ಹೈಕೋರ್ಟ್ ಆದೇಶ |

Share

ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್‌ ಆದೇಶ ನೀಡಿದೆ. ಅಕ್ರಮವಾಗಿ ಅಡಿಕೆ ಸಾಗಿಸಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟದ ವಹಿವಾಟು ದಂಧೆಯಲ್ಲಿ ತೊಡಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಹೈಕೋರ್ಟ್‌ ತಿಳಿಸಿದೆ.

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ವ್ಯಾಪಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಆದೇಶಿಸಿದೆ. ಅಂತಹ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಖಡಕ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಶುಕ್ರೆ ಮತ್ತು ಅನಿಲ್ ಪನ್ಸಾರೆ ಅವರ ಪೀಠವು,  2016 ರಲ್ಲಿ ಸಲ್ಲಿಸಲಾದ  ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಸಿಆರ್‌ಪಿಐಎಲ್) ವಿಚಾರಣೆ ನಡೆಸುತ್ತಿದ್ದು,ಈ ಅರ್ಜಿಯಲ್ಲಿ ಮಾರುಕಟ್ಟೆಯಲ್ಲಿ ಕಳಪೆ ಅಡಿಕೆ ಮಾರಾಟವಾಗುತ್ತಿರುವ ವಿಷಯವನ್ನು ಎತ್ತಿ ಹಿಡಿಯಲಾಗಿತ್ತು.

ನಾಗ್ಪುರದಲ್ಲಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟ ಮತ್ತು ಬಳಕೆಯ ಅಕ್ರಮ ವಹಿವಾಟು ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪೀಠವು ಅಸಮಾಧಾನ ವ್ಯಕ್ತಪಡಿಸಿತು. ಇಂತಹ ಕಳಪೆ ಅಡಿಕೆಯು ಮಾನವ ಬಳಕೆಗೆ ಯೋಗ್ಯವಲ್ಲ ಎಂಬ ಅರಿವು ಇದ್ದರೂ ಕ್ರಮವಾಗುತ್ತಿಲ್ಲ ಏಕೆ ಎಂದು ಪೀಠವು ಪ್ರಶ್ನಿಸಿತು.

ಕಳಪೆ ಅಡಿಕೆ ವಿತರಣೆ ಹಾಗೂ ಅಂತಹ ಕೃತ್ಯಗಳು ಮತ್ತು ಅಪರಾಧಗಳಿಗೆ ಸಂಬಂಧಿಸಿದಂತೆ ಸೂಕ್ತ ಪ್ರಕರಣ ದಾಖಲಿಸಿ  ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದರು.

“ನಾಗ್ಪುರದ ಪೊಲೀಸ್ ಕಮಿಷನರ್ ಅವರು ಕಾನೂನಿನಲ್ಲಿ ಅನುಮತಿಸಬಹುದಾದ ಕಳಪೆ ಗುಣಮಟ್ಟದ ಅಡಿಕೆ ಆಮದು ಹಾಗೂ ಮಾರಾಟ ಮತ್ತು ಬಳಕೆಯಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧ  ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆಗಳಿಗೆ ಸ್ವಾತಂತ್ರ್ಯ ಇದೆ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ. ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

17 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

17 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

17 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

17 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago