ಕಳಪೆ ಗುಣಮಟ್ಟದ ಅಡಿಕೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ. ಇದೀಗ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ತಂಡವು ತಪಾಸಣೆ ನಡೆಸಿ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.
ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ತಂಡವು ನಾಗ್ಪುರದಲ್ಲಿ 3.36 ಕೋಟಿ ಮೌಲ್ಯದ 84,537 ಕಿಲೋಗ್ರಾಂಗಳಷ್ಟು ಅಡಿಕೆಯನ್ನು ಗುರುವಾರ ವಶಪಡಿಸಿಕೊಂಡಿದೆ ಈ ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳ ಸಂದೇಹ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಯುತ್ತಿದೆ.
ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿ ಇಲ್ಲಿನ ಅಡಿಕೆ ಜೊತೆ ಬೆರೆಸಿ ಮಾರುಕಟ್ಟೆಗೆ ಬಿಡುವ ಜಾಲವೊಂದು ಸಕ್ರಿಯವಾಗಿದೆ ಎಂದು ಶಂಕಿಸಲಾಗಿದೆ. ಇದರ ಜೊತೆಗೆ ಅಡಿಕೆಗೆ ಇತರ ಕಲಬೆರಕೆ ವಸ್ತುಗಳನ್ನೂ ಸೇರಿಸಿ ಮಾರುವ ಬಗ್ಗೆಯೂ ಸಂದೇಹ ಇದೆ. ಈ ಎಲ್ಲಾ ದೂರುಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ದಾಳಿ ನಡೆದಿದೆ. ಈಗ ತನಿಖೆ ನಡೆಯುತ್ತಿದೆ.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…