Advertisement
MIRROR FOCUS

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

Share

ದೇಶಾದ್ಯಂತ LPG ಸಿಲಿಂಡರ್‌ಗಳ ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನದಲ್ಲಿ 51.5 ಲಕ್ಷಕ್ಕೂ ಹೆಚ್ಚು ಸಿಲಿಂಡರ್‌ಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

LPG ಸಿಲಿಂಡರ್‌ಗಳನ್ನು ಸಂಗ್ರಹಣೆ ಮಾಡುವುದು ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ದೇಶದಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಿನ್ನೆ 3,400ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, 214 LPG ವಿತರಕರಿಗೆ ದಂಡ ವಿಧಿಸಲಾಗಿದೆ. ಜೊತೆಗೆ 55 ವಿತರಕರ ಪರವಾನಗಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಫೆಬ್ರವರಿ ತಿಂಗಳಲ್ಲಿ ದಿನಸಿ ಸರಾಸರಿ 77 ಸಾವಿರ 5 ಕೆ.ಜಿ ಸಿಲಿಂಡರ್ ಮಾರಾಟವಾಗುತ್ತಿದ್ದರೆ, ಈಗ ದೇಶಾದ್ಯಂತ 1 ಲಕ್ಷಕ್ಕೂ ಹೆಚ್ಚು ಸಣ್ಣ ಗಾತ್ರದ ಸಿಲಿಂಡರ್‌ಗಳು ವಿತರಣೆ ಆಗುತ್ತಿವೆ. ಈ 5 ಕೆ.ಜಿ LPG ಸಿಲಿಂಡರ್‌ಗಳನ್ನು ಮುಖ್ಯವಾಗಿ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ದುರ್ಬಲ ವರ್ಗದವರಿಗೆ ಒದಗಿಸಲಾಗುತ್ತಿದೆ.

ಇದರ ಜೊತೆಗೆ, ಮಾರ್ಚ್ ತಿಂಗಳಿಂದ ಇಲ್ಲಿಯವರೆಗೆ ಸುಮಾರು 4.15 ಲಕ್ಷ PNG (ಪೈಪ್ ನ್ಯಾಚುರಲ್ ಗ್ಯಾಸ್) ಸಂಪರ್ಕಗಳನ್ನು ನೀಡಲಾಗಿದೆ. ಹೊಸದಾಗಿ 4.55 ಲಕ್ಷ ಗ್ರಾಹಕರು PNG ಸಂಪರ್ಕಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಪಶ್ಚಿಮ ಏಷ್ಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಹಡಗುಗಳು ಮತ್ತು ನಾವಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಫೆಬ್ರವರಿ 28ರಿಂದ ಇಲ್ಲಿಯವರೆಗೆ ಸುಮಾರು 8.71 ಲಕ್ಷ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India recorded distribution of over 5.15 million LPG cylinders in a single day, indicating stable supply. The government has taken strict action against illegal storage and black marketing, while also expanding access through small cylinders and PNG connections.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

19 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

1 day ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

1 day ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

1 day ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

1 day ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago