#LPGPrices | ಗ್ರಾಹಕರಿಗೆ ಸಿಹಿ ಸುದ್ದಿ | ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ | ಕೇಂದ್ರ ಸಂಪುಟದಿಂದ ಅನುಮೋದನೆ

August 29, 2023
6:10 PM
ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಎಲ್‌ ಪಿ ಜಿ ದರ ಇಳಿಕೆಯಾಗಿ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ.

ಗಗನಕ್ಕೇರಿದ್ದ LPG ಸಿಲಿಂಡರ್‌ಗಳ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ #LPGCylinderPrice 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ.

ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಟೈಮ್ಸ್ ಆಫ್ ಇಂಡಿಯಾದಲ್ಲಿ ಬಂದಿರುವ ವರದಿ ಪ್ರಕಾರ ಉಜ್ವಲ ಯೋಜನೆ ಅಡಿ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 200 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ, ಈ ಸ್ಕೀಮ್​ನಲ್ಲಿ 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ ನೀಡಲಾಗುವ ಒಟ್ಟು ಸಬ್ಸಿಡಿ 400 ರೂ ಆಗುತ್ತದೆ. ಸಬ್ಸಿಡಿರಹಿತ 14 ಕಿಲೋ ಎಲ್​ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ.

ಮೇ ತಿಂಗಳಿಂದೀಚೆ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್​ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ ಹೆಚ್ಚಳವಾಗಿತ್ತು. ಈಗ ಉಜ್ವಲ ಸ್ಕೀಮ್ ಅಡಿಯಲ್ಲಿ ಸರ್ಕಾರ 200 ರೂ ಸಬ್ಸಿಡಿ ಘೋಷಿಸಿದೆ. ಕೇಂದ್ರ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಸ್ಕೀಮ್ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯನ್ನು 200 ರೂನಷ್ಟು ಇಳಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ಸಬ್ಸಿಡಿ ನಿರ್ಧಾರದಿಂದ ಒಂದು ವರ್ಷದಲ್ಲಿ ಸುಮಾರು 7,500 ಕೋಟಿ ರೂ ಹೊರೆಯಾಗುವ ನಿರೀಕ್ಷೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror