ಗಗನಕ್ಕೇರಿದ್ದ LPG ಸಿಲಿಂಡರ್‌ಗಳ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ 14 ಕಿಲೋ ಎಲ್ಪಿಜಿ ಸಿಲಿಂಡರ್ಗೆ #LPGCylinderPrice 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ.
ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಟೈಮ್ಸ್ ಆಫ್ ಇಂಡಿಯಾದಲ್ಲಿ ಬಂದಿರುವ ವರದಿ ಪ್ರಕಾರ ಉಜ್ವಲ ಯೋಜನೆ ಅಡಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗೆ 200 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ, ಈ ಸ್ಕೀಮ್ನಲ್ಲಿ 14 ಕಿಲೋ ಎಲ್ಪಿಜಿ ಸಿಲಿಂಡರ್ಗೆ ನೀಡಲಾಗುವ ಒಟ್ಟು ಸಬ್ಸಿಡಿ 400 ರೂ ಆಗುತ್ತದೆ. ಸಬ್ಸಿಡಿರಹಿತ 14 ಕಿಲೋ ಎಲ್ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ.
ಮೇ ತಿಂಗಳಿಂದೀಚೆ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ ಹೆಚ್ಚಳವಾಗಿತ್ತು. ಈಗ ಉಜ್ವಲ ಸ್ಕೀಮ್ ಅಡಿಯಲ್ಲಿ ಸರ್ಕಾರ 200 ರೂ ಸಬ್ಸಿಡಿ ಘೋಷಿಸಿದೆ. ಕೇಂದ್ರ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಸ್ಕೀಮ್ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು 200 ರೂನಷ್ಟು ಇಳಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ಸಬ್ಸಿಡಿ ನಿರ್ಧಾರದಿಂದ ಒಂದು ವರ್ಷದಲ್ಲಿ ಸುಮಾರು 7,500 ಕೋಟಿ ರೂ ಹೊರೆಯಾಗುವ ನಿರೀಕ್ಷೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…