ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಉಜ್ವಲ ಅಡಿಯಲ್ಲಿ 14.2 ಕೆಜಿ ಎಲ್‌ಪಿಜಿ ಬೆಲೆ 500 ರಿಂದ 550 ಕ್ಕೆ ಮತ್ತು ಉಜ್ವಲೇತರ ಬಳಕೆದಾರರಿಗೆ 803 ರಿಂದ 853 ಕ್ಕೆ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.……..ಮುಂದೆ ಓದಿ…..
ಕಳೆದ ವಾರ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಈಗ ಏರಿಸಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲೆ ಕೇಂದ್ರ ಅಬಕಾರಿ ಸುಂಕದಲ್ಲಿ ಎರಡು ರೂ ಏರಿಕೆ ಮಾಡಲಾಗಿರುವ ಸುದ್ದಿಯ ನಂತರ ಇದೀಗ ಎಲ್‌ಪಿಜಿ ಶಾಕ್ ಬಂದಿದೆ.
ಇಂದು ಮುಂಜಾನೆ, ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ, ಈ ಹೆಚ್ಚಳವನ್ನು ಗ್ರಾಹಕರ ಮೇಲೆ ಹಾಕಲಾಗಿಲ್ಲ, ಸದ್ಯ ತೈಲ ಮಾರುಕಟ್ಟೆ ಕಂಪನಿಗಳು ಭರಿಸುತ್ತವೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ.ಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸುಂಕಗಳ ಹೆಚ್ಚಳವು ಏಪ್ರಿಲ್ 8 ರಿಂದ ಜಾರಿಗೆ ಬರಲಿದೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…