ಜಾನುವಾರುಗಳಲ್ಲಿ ಮತ್ತೆ ಕಾಣಿಸಿಕೊಂಡ ಚರ್ಮಗಂಟು ರೋಗ | ಎಚ್ಚರಿಕೆ ವಹಿಸಲು ಹೈನುಗಾರರಿಗೆ ಸೂಚನೆ |

September 26, 2022
3:25 PM

ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಮತ್ತೆ ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿದ್ದು ರಾಜ್ಯದ ಎಲ್ಲಾ ಕಡೆಯೂ ಹೈನುಗಾರರು ಈ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸೂಚನೆ ನೀಡಿದೆ. 

ಈ ರೋಗವು  ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಬೇಕು.

ಈ ರೋಗ ಲಕ್ಷಣಗಳಲ್ಲಿ ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು. ಕಾಲುಗಳಲ್ಲಿ ಬಾವು, ನಿಶ್ಯಕ್ತಿ ಇರುತ್ತದೆ. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ರೋಗ ಉಲ್ಭಣವಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror