ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಮತ್ತೆ ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿದ್ದು ರಾಜ್ಯದ ಎಲ್ಲಾ ಕಡೆಯೂ ಹೈನುಗಾರರು ಈ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸೂಚನೆ ನೀಡಿದೆ.
ಈ ರೋಗವು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಬೇಕು.
ಈ ರೋಗ ಲಕ್ಷಣಗಳಲ್ಲಿ ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು. ಕಾಲುಗಳಲ್ಲಿ ಬಾವು, ನಿಶ್ಯಕ್ತಿ ಇರುತ್ತದೆ. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ರೋಗ ಉಲ್ಭಣವಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಹೀಗಾಗಿ ಹೈನುಗಾರರು ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ ನೀಡಿದೆ.
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.