Advertisement
ಸುದ್ದಿಗಳು

ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ | ಚಂದ್ರನತ್ತ ವಿಜ್ಞಾನಾಸಕ್ತರ ಕುತೂಹಲ

Share

ಇಂದು ರಾತ್ರಿ ಸಂಭವಿಸಲಿರುವ ಖಗ್ರಾಸ ಚಂದ್ರಗ್ರಹಣ ವೀಕ್ಷಿಸಲು ವಿಜ್ಞನಾಸಕ್ತರು ಕುತೂಹಲದಿಂದ ಕಾಯುತ್ತಿದ್ದಾರೆ.

ಚಂದ್ರ ಗ್ರಹಣದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಶೀಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯವನ್ನು ಸಂಜೆ 4.30 ಕ್ಕೆ ಮುಚ್ಚಲಾಗಿದೆ. ನಾಳೆ ಬೆಳಗ್ಗೆ ಶುದ್ಧೀಕರಣದ ನಂತರ ತೆರೆಯಲಾಗುವುದು. ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯವನ್ನು ಸಂಜೆ 4 ಗಂಟೆಗೆ ಮುಚ್ಚಲಾಗಿದೆ. ನಾಳೆ ಬೆಳಗಿನ ಜಾವ ಸ್ವಾಮಿಗೆ ತೈಲಾಭಿಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಿ, ಭಕ್ತಾದಿಗಳ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ. ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯಗಳಲ್ಲಿ ಪೂಜೆ, ದರ್ಶನ, ಅನ್ನಸಂತಾರ್ಪಣೆ ಕಾರ್ಯಕ್ರಮಗಳನ್ನು ಇಂದು ಮಧ್ಯಾಹ್ನದ ನಂತರ ರದ್ದುಪಡಿಸಲಾಗಿದೆ. ಇನ್ನು ಶೃಂಗೇರಿ ಶಾರದಾ ಪೀಠದಲ್ಲಿ ಎಂದಿನಂತೆ ದೇವರ ದರ್ಶನ, ಪೂಜಾ ಕಾರ್ಯಕ್ರಮಗಳು ಇರಲಿದ್ದು, ಮಠದ ಯಜ್ಞ ಶಾಲೆಯಲ್ಲಿ ಇಂದು ರಾತ್ರಿ 10  ರಿಂದ 12 ಗಂಟೆಯವರಗೆ  ಚಂದ್ರ ಗ್ರಹಣ ಶಾಂತಿ ಹೋಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾರದ ಪೀಠದ ಆಡಳಿತ ಮಂಡಳಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

16 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

17 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

17 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago