ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ @BSBommai ಅವರು ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಪ್ರವಾಸ ಮಾಡಿ, ಪ್ರವಾಹ ಪರಿಸ್ಥಿತಿ ಪರಿಶೀಲಿಸಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹಾನಿಯಾಗಿರುವ ರಸ್ತೆ, ವಿದ್ಯುತ್ ಕಂಬಗಳು, ಸಣ್ಣ ಸೇತುವೆಗಳ ಪುನಶ್ಚೇತನಕ್ಕೆ ಈ ಕೂಡಲೇ 500 ಕೋಟಿ ರೂ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. pic.twitter.com/RWlnxmBJlw
Advertisement— CM of Karnataka (@CMofKarnataka) July 13, 2022
ಉಡುಪಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು. ನಂತರ ಆಗಸ್ಟ್ ಸಮಯದಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು. ಜಿಲ್ಲೆಗಳಿಂದ ವರದಿ ಹಾಗೂ ಅಂದಾಜು ಪಟ್ಟಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಹೇಳಿದರು. ಮಳೆಗೆ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ರಸ್ತೆಗಳು ಸೇರಿ ದಕ್ಷಿಣ ಕನ್ನಡ- 727 ಕಿ.ಮಿ, ಉತ್ತರ ಕನ್ನಡ 500 ಕಿ.ಮೀ, ಉಡುಪಿ 960 ಕಿ.ಮೀ, 2187 ಕಿ.ಮೀ ರಸ್ತೆ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದರು.
ಕೊಡಗು ಹಾಗೂ ಕರಾವಳಿಯಲ್ಲಿ ಭೂಕಂಪನದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ, ಬೆಂಗಳೂರು ಮೈಸೂರು ವಿವಿಯಿಂದ ಸುದೀರ್ಘ ಅಧ್ಯಯನ ಮಾಡಿ, ಪರಿಹಾರ ಸೂಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಸಿಎಂ ಹೇಳಿದರು. ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಮೃತ ವಿವಿ ಯವರು ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ವರದಿಯಲ್ಲಿ ಹೇಳಿರುವ ಪರಿಹಾರಗಳ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಿದೆ ಎಂದರು.