ಮಳೆ ಹಾನಿ | ನೆರೆಹಾನಿಗೆ ತುರ್ತು 500 ಕೋಟಿ ರೂಪಾಯಿ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ |

July 13, 2022
7:04 PM

ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು. ನಂತರ  ಆಗಸ್ಟ್ ಸಮಯದಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು.  ಜಿಲ್ಲೆಗಳಿಂದ ವರದಿ ಹಾಗೂ ಅಂದಾಜು ಪಟ್ಟಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಹೇಳಿದರು. ಮಳೆಗೆ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ರಸ್ತೆಗಳು ಸೇರಿ ದಕ್ಷಿಣ ಕನ್ನಡ- 727 ಕಿ.ಮಿ, ಉತ್ತರ ಕನ್ನಡ 500 ಕಿ.ಮೀ, ಉಡುಪಿ 960 ಕಿ.ಮೀ, 2187 ಕಿ.ಮೀ ರಸ್ತೆ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದರು.

ಕೊಡಗು ಹಾಗೂ ಕರಾವಳಿಯಲ್ಲಿ ಭೂಕಂಪನದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ, ಬೆಂಗಳೂರು ಮೈಸೂರು ವಿವಿಯಿಂದ ಸುದೀರ್ಘ ಅಧ್ಯಯನ ಮಾಡಿ, ಪರಿಹಾರ ಸೂಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಸಿಎಂ ಹೇಳಿದರು. ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಮೃತ ವಿವಿ ಯವರು ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ವರದಿಯಲ್ಲಿ ಹೇಳಿರುವ ಪರಿಹಾರಗಳ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror