Advertisement
ರಾಜ್ಯ

ಮಳೆ ಹಾನಿ | ನೆರೆಹಾನಿಗೆ ತುರ್ತು 500 ಕೋಟಿ ರೂಪಾಯಿ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ |

Share

ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement
Advertisement

Advertisement

ಉಡುಪಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು. ನಂತರ  ಆಗಸ್ಟ್ ಸಮಯದಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು.  ಜಿಲ್ಲೆಗಳಿಂದ ವರದಿ ಹಾಗೂ ಅಂದಾಜು ಪಟ್ಟಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಹೇಳಿದರು. ಮಳೆಗೆ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ರಸ್ತೆಗಳು ಸೇರಿ ದಕ್ಷಿಣ ಕನ್ನಡ- 727 ಕಿ.ಮಿ, ಉತ್ತರ ಕನ್ನಡ 500 ಕಿ.ಮೀ, ಉಡುಪಿ 960 ಕಿ.ಮೀ, 2187 ಕಿ.ಮೀ ರಸ್ತೆ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದರು.

ಕೊಡಗು ಹಾಗೂ ಕರಾವಳಿಯಲ್ಲಿ ಭೂಕಂಪನದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ, ಬೆಂಗಳೂರು ಮೈಸೂರು ವಿವಿಯಿಂದ ಸುದೀರ್ಘ ಅಧ್ಯಯನ ಮಾಡಿ, ಪರಿಹಾರ ಸೂಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಸಿಎಂ ಹೇಳಿದರು. ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಮೃತ ವಿವಿ ಯವರು ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ವರದಿಯಲ್ಲಿ ಹೇಳಿರುವ ಪರಿಹಾರಗಳ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಿದೆ ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

2 hours ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

10 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

10 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

11 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…

11 hours ago