ಕೃಷಿ

ಏರಿಕೆಯಾದ ಪೊಟ್ಯಾಷ್ ರಸಗೊಬ್ಬರದ ದರ: ಕೃಷಿ ಇಲಾಖೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದಂತೆ ಎಮ್.ಒ.ಪಿ ರಸಗೊಬ್ಬರದ ಬೆಲೆಯು ಸಹ ಏರಿಕೆಯಾಗಿರುತ್ತದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

Advertisement
Advertisement

ಎಮ್.ಒ.ಪಿ ರಸಗೊಬ್ಬರದ ಪರಿಷ್ಕೃತ ಗರಿಷ್ಠ ಮಾರಾಟ ಬೆಲೆ ಪ್ರತಿ ಚೀಲಕ್ಕೆ ರೂ 1700. ದೇಶದಲ್ಲಿ ಶೇಕಡ 100ರಷ್ಟು ಎಮ್.ಒ.ಪಿ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದ್ದ ರಸಗೊಬ್ಬರದ ಗರಿಷ್ಠ ಮಾರಾಟ ದರವನ್ನು ಸರಬರಾಜು ಸಂಸ್ಥೆಗಳಿಂದಲೇ ನಿಗಧಿ ಪಡಿಸಲಾಗುತ್ತದೆ. ಮಾತ್ರವಲ್ಲ ಇಂಡಿಯನ್ ಪೊಟ್ಯಾಷ್ ಲಿಮಿಟೆಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸರಬರಾಜುದಾರರೊಂದಿಗೆ ಎಮ್.ಒ.ಪಿ ರಸಗೊಬ್ಬರ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ.

ಹೊಸ ಆಮದು ಬೆಲೆ, ಕಸ್ಟಮ್ಸ್ ಸುಂಕ ಹಾಗೂ ಜಿ.ಎಸ್.ಟಿ ಬಂದರಿನಲ್ಲಿ ರಸಗೊಬ್ಬರದ ನಿರ್ವಹಣೆಯ ಇತರ ವೆಚ್ಚಗಳು ಸೇರಿ ಒಟ್ಟು ದರವು ಪ್ರತಿ ಟನ್‌ಗೆ ರೂ, 40.147 ಎಂದು ನಿಗಧಿಪಡಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವು ಪ್ರತಿ ಟನ್ ಎಮ್.ಒ.ಪಿ ನೀಡುವ ರಿಯಾಯಿತು ದರ ರೂ. 6,070 ಹೊರತು ಪಡಿಸಿದಲ್ಲಿ ಪ್ರತಿ ಟನ್ನಿನ ಮಾರಾಟ ದರವು ರೂ. 34,000 ಆಗುತ್ತದೆ. ಹಾಗಾಗಿ ಪ್ರತಿ ಚೀಲವು ದರವು ರೂ. 1700 ಆಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

33 minutes ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

40 minutes ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

46 minutes ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

1 hour ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

12 hours ago