Advertisement
ಸುದ್ದಿಗಳು

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

Share

ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ–275ರ ಮಾಣಿ–ಸಂಪಾಜೆ ರಸ್ತೆಯ ದುರಸ್ತಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ₹49.22 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರೊಂದಿಗೆ ಈ ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಪ್ರಮುಖ ರಸ್ತೆ ಮೂಲಸೌಕರ್ಯ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ ಸಂಸದರು, ಕರಾವಳಿ ಹಾಗೂ ಒಳನಾಡಿನ ನಡುವಿನ ಸಂಪರ್ಕ ಸುಧಾರಣೆಗೆ ಮಾಣಿ–ಸಂಪಾಜೆ ರಸ್ತೆ ಮೇಲ್ದರ್ಜೀಕರಣ ಅತ್ಯಂತ ಅಗತ್ಯ ಎಂದು ವಿವರಿಸಿದರು. ಈ ಯೋಜನೆಗೆ ಶೀಘ್ರದಲ್ಲೇ ಅಲೈನ್‌ಮೆಂಟ್ ಹಾಗೂ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಒತ್ತಾಯಿಸಿದರು.

ಈ ರಸ್ತೆ ಅಭಿವೃದ್ಧಿಯಿಂದ ಸಂಚಾರ ಸುರಕ್ಷತೆ ಹೆಚ್ಚುವುದರ ಜೊತೆಗೆ ವಾಹನ ಸಂಚಾರ ಸುಗಮವಾಗಿ, ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಸಂಸದರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಸಭೆಯಲ್ಲಿ ಮಂಗಳೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇ ಯೋಜನೆಯ ಪ್ರಗತಿಯ ಬಗ್ಗೆಯೂ ಚರ್ಚೆ ನಡೆಯಿತು. ವಿಶೇಷವಾಗಿ ಶಿರಾಡಿ ಘಾಟ್ ವಿಭಾಗದ ಹೊಸ ರಸ್ತೆ ವಿನ್ಯಾಸಕ್ಕೆ ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿಯಿಂದ ಅನುಮೋದನೆ ದೊರೆತಿರುವುದನ್ನು ಸಂಸದರು ಸ್ವಾಗತಿಸಿದರು. ಪ್ರಸ್ತುತ ಯೋಜನೆಯ DPR ತಯಾರಿ ಹಂತದಲ್ಲಿದ್ದು, ಪರಿಸರ, ಅರಣ್ಯ ಹಾಗೂ ವನ್ಯಜೀವಿ ಇಲಾಖೆಗಳ ಅನುಮತಿ ಪ್ರಕ್ರಿಯೆಯೂ ಮುಂದುವರಿದಿದೆ.

ಭೇಟಿಯ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಬ್ರಿಜೇಶ್ ಚೌಟ ಅವರು, “ಹೆಚ್ಚಿನ ಜನರು ತಮ್ಮ ಊರಿಗೆ ಮರಳಬೇಕಾದರೆ ಮೊದಲು ವಿಶ್ವದರ್ಜೆಯ ರಸ್ತೆ ಸಂಪರ್ಕ ವ್ಯವಸ್ಥೆ ನಿರ್ಮಿಸಬೇಕು. ಉತ್ತಮ ರಸ್ತೆ ಸಂಪರ್ಕವು ಹೂಡಿಕೆ, ಉದ್ಯೋಗ ಹಾಗೂ ಆರ್ಥಿಕ ಅಭಿವೃದ್ಧಿಗೆ ದಾರಿಯಾಗುತ್ತದೆ. ಈ ಯೋಜನೆಗಳು ಪೂರ್ಣಗೊಳ್ಳುವವರೆಗೆ ನಾನು ನಿರಂತರವಾಗಿ ಶ್ರಮಿಸುತ್ತೇನೆ” ಎಂದು ಹೇಳಿದರು.

The Central Government has sanctioned ₹49.22 crore for repair works on the Maani–Sampaje stretch of NH-275 in Dakshina Kannada. MP Captain Brijesh Chowta also met the Ministry of Road Transport Secretary in New Delhi, urging speedy approval for the proposed four-laning project and reviewing progress on the Bengaluru–Mangaluru Expressway.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

21 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

21 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago