ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಭೇಟಿ ಬಹಳಷ್ಟು ಸದ್ದು ಮಾಡಿತು. 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿದರು. ಈ ಎಲ್ಲಾ ಯೋಜನೆಗಳಲ್ಲಿ ಮಂಗಳೂರಿನ ಬಂದರು ಅಭಿವೃದ್ಧಿ ಕರಾವಳಿ ಜಿಲ್ಲೆಗೆ ಬಹುದೊಡ್ಡ ಕೊಡುಗೆಯಾಗಲಿದೆ. ಈ ಯೋಜನೆಗಳನ್ನು, ಉದ್ದೇಶವನ್ನು ಸರಿಯಾಗಿ ಬಳಸಿಕೊಂಡರೆ. ಇದಕ್ಕೆ ಕೇಂದ್ರ ಸರ್ಕಾರ ಮಾತ್ರವಲ್ಲ ರಾಜ್ಯದ ಬಂದರು ಇಲಾಖೆಗಳೂ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವುದೂ ಮುಖ್ಯವಿದೆ.
ಮಂಗಳೂರು ಬಂದರು ಅಭಿವೃದ್ಧಿಯ ಮೂಲಕ ಕರಾವಳಿ ಜಿಲ್ಲೆಯೂ ವಿವಿಧ ಕಾರಣಗಳಿಂದ ಅಭಿವೃದ್ಧಿಯಾಗಲಿದೆ. ರಪ್ತಿಗೆ ಆದ್ಯತೆ ನೀಡಬಹುದಾಗಿದೆ, ಮೀನುಗಾರರು ಹಾಗೂ ಕಡಲು ಉದ್ಯಮಗಳಿಗೂ ಆದ್ಯತೆ ನೀಡಬಹುದಾಗಿದೆ. ತಮ್ಮ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಉಲ್ಲೇಖಿಸಿದ್ದು ಹೀಗೆ, ” ದೇಶದ ಪ್ರಥಮ ಸ್ವದೇಶಿ ಏರ್ ಕ್ರಾಫ್ಟ್ ವಾಹಕ ನೌಕೆಯನ್ನು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ 3800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ- ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ. ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ ದ್ವಿಗುಣಳ್ಳಲಿದೆ ಎಂದು ಹೇಳಿದರು.
ರಾಜ್ಯದ ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 3800ಕೋಟಿ ರೂ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ. ನವಭಾರತದ ನಿರ್ಮಾಣದಲ್ಲಿ ನಮ್ಮ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಸರ್ಬಾನಂದ್ ಸೊನೊವಾಲ, ಶ್ರೀಪಾದ್ ನಾಯಕ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.