Advertisement
MIRROR FOCUS

ಪ್ರಧಾನಿ ಮಂಗಳೂರು ಭೇಟಿಯಿಂದ ಕರಾವಳಿಗೆ ಪ್ರಯೋಜನ ಏನು ?| ಕರಾವಳಿಯ ಬಂದರು ಅಭಿವೃದ್ಧಿ | ಕರಾವಳಿ ಜಿಲ್ಲೆಯ ಅಭಿವೃದ್ದಿಗೆ ವೇಗ | ಕೃಷಿಕರಿಗೆ ನೆರವು |

Share

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಭೇಟಿ ಬಹಳಷ್ಟು ಸದ್ದು ಮಾಡಿತು. 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿದರು. ಈ ಎಲ್ಲಾ ಯೋಜನೆಗಳಲ್ಲಿ ಮಂಗಳೂರಿನ ಬಂದರು ಅಭಿವೃದ್ಧಿ ಕರಾವಳಿ ಜಿಲ್ಲೆಗೆ ಬಹುದೊಡ್ಡ ಕೊಡುಗೆಯಾಗಲಿದೆ. ಈ ಯೋಜನೆಗಳನ್ನು, ಉದ್ದೇಶವನ್ನು ಸರಿಯಾಗಿ ಬಳಸಿಕೊಂಡರೆ. ಇದಕ್ಕೆ ಕೇಂದ್ರ ಸರ್ಕಾರ ಮಾತ್ರವಲ್ಲ ರಾಜ್ಯದ ಬಂದರು ಇಲಾಖೆಗಳೂ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವುದೂ ಮುಖ್ಯವಿದೆ.

Advertisement
Advertisement
Advertisement
Advertisement

ಮಂಗಳೂರು ಬಂದರು ಅಭಿವೃದ್ಧಿಯ ಮೂಲಕ ಕರಾವಳಿ ಜಿಲ್ಲೆಯೂ ವಿವಿಧ ಕಾರಣಗಳಿಂದ ಅಭಿವೃದ್ಧಿಯಾಗಲಿದೆ. ರಪ್ತಿಗೆ ಆದ್ಯತೆ ನೀಡಬಹುದಾಗಿದೆ, ಮೀನುಗಾರರು ಹಾಗೂ ಕಡಲು ಉದ್ಯಮಗಳಿಗೂ ಆದ್ಯತೆ ನೀಡಬಹುದಾಗಿದೆ.  ತಮ್ಮ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಉಲ್ಲೇಖಿಸಿದ್ದು ಹೀಗೆ, ” ದೇಶದ ಪ್ರಥಮ ಸ್ವದೇಶಿ ಏರ್ ಕ್ರಾಫ್ಟ್  ವಾಹಕ ನೌಕೆಯನ್ನು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ 3800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ- ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ. ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ  ದ್ವಿಗುಣಳ್ಳಲಿದೆ ಎಂದು ಹೇಳಿದರು.

Advertisement

ರಾಜ್ಯದ ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 3800ಕೋಟಿ ರೂ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ  ನಾಲ್ಕು ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ. ನವಭಾರತದ ನಿರ್ಮಾಣದಲ್ಲಿ ನಮ್ಮ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಸರ್ಬಾನಂದ್ ಸೊನೊವಾಲ, ಶ್ರೀಪಾದ್ ನಾಯಕ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

2 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

2 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago