ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ರಾತ್ರಿ 8.30 ರಿಂದ ಬೆಳಗ್ಗೆ 6.30 ವರೆಗೆ ವಾಹನ ಸಂಚಾರ ನಿಷೇಧ ಇರುತ್ತದೆ.ಹಗಲಿನ ವೇಳೆ ಎಂದಿನಂತೆ ವಾಹನ ಸಂಚಾರ ಇರುತ್ತದೆ. ಹೆದ್ದಾರಿಯ ಮದೆನಾಡು ಬಳಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿತದ ಆತಂಕ ಇದೆ. ಹೀಗಾಗಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ.
ಮಡಿಕೇರಿ – ಸಂಪಾಜೆ ಹೆದ್ದಾರಿ | ಎರಡು ದಿನ ರಾತ್ರಿ ವೇಳೆ ಸಂಚಾರ ನಿಷೇಧಕ್ಕೆ ಜಿಲ್ಲಾಧಿಕಾರಿ ಆದೇಶ | #kodagu #sampaje #madenadu #HeavyRain#Karnatakarains #ಮಳೆ #ಕೊಡಗು #ಸಂಪಾಜೆ #ruralmirrorhttps://t.co/7vHLrDdLVV
— theruralmirror (@ruralmirror) August 10, 2022
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel