ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ಉತ್ತರ ಪ್ರದೇಶದ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ತ್ರಿವೇಣಿ ಸಂಗಮದಲ್ಲಿ ಇಂದು 30.47 ಲಕ್ಷಕ್ಕೂ ಹೆಚ್ಚು ಭಕ್ತರು ಮತ್ತು ಇಲ್ಲಿಯವರೆಗೆ 9.24 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳಕ್ಕೆ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಿಂದ 150ಕ್ಕೂ ಹೆಚ್ಚು ವಿಶೇಷ ರೈಲು ಸಂಚಾರವನ್ನು ಆರಂಭಿಸಲಾಗಿದೆ. ಇದೇ 29 ರಂದು ಮೌನಿ ಅಮವಾಸ್ಯೆ ಇರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೆಚ್ಚು ಭಕ್ತರು ಕುಂಭಮೇಳಕ್ಕೆ ಬರುವ ಸಾಧ್ಯತೆಗಳನ್ನು ಗಮನಿಸಿ ಈ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ. ಮೌನಿ ಅಮವಾಸ್ಯೆ ಸಂದರ್ಭದಲ್ಲಿ 10 ಕೋಟಿಗೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಒಟ್ಟಾರೆ 400ಕ್ಕೂ ಹೆಚ್ಚು ವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement