ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರಯಾಗ್‌ರಾಜ್‌ಗೆ ಆಗಮಿಸಿದ್ದಾರೆ. ನಿನ್ನೆ ಸಹ ಕೋಟ್ಯಂತರ ಶ್ರದ್ಧಾಳುಗಳು ಪುಣ್ಯಸ್ನಾನದಲ್ಲಿ ಭಾಗಿಯಾದರು. ಈಗಾಗಲೇ 60 ಕೋಟಿಗೂ ಅಧಿಕ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದಿದ್ದಾರೆ. ಕುಂಭಮೇಳದಲ್ಲಿ ಭಾಗಿಯಾಗುವ ಭಕ್ತರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 15 ಸಾವಿರಕ್ಕೂ ಅಧಿಕ ಕಾರ್ಮಿಕರು ನೈರ್ಮಲ್ಯ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ವಿಶ್ವದಾಖಲೆ ಸೃಷ್ಟಿಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವ ಕುರಿತು ಪುಣ್ಯಸ್ನಾನದಲ್ಲಿ ಭಾಗಿಯಾದ ಯಾತ್ರಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…