#ಶಿವರಾತ್ರಿ | ಮಹಾಶಿವರಾತ್ರಿ | ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಯೋಗ್ಯ ಪದ್ಧತಿ …|

March 1, 2022
2:13 PM

ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಮುನ್ನ ನಂದಿಯ ಎರಡೂ ಕೊಂಬುಗಳಿಗೆ ಕೈಮುಟ್ಟಿಸಿ ಅದರ ದರ್ಶನ ಪಡೆಯಬೇಕು. ನಂದಿಯ ಕೊಂಬುಗಳಿಂದ ಪ್ರಕ್ಷೇಪಿತವಾಗುವ ಶಿವತತ್ತ್ವದ ಸಗುಣ ಮಾರಕ ಲಹರಿಗಳಿಂದ ವ್ಯಕ್ತಿಯ ಶರೀರದಲ್ಲಿನ ರಜ-ತಮ ಕಣಗಳ ವಿಘಟನೆಯಾಗಿ ವ್ಯಕ್ತಿಯ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಇದರಿಂದ ವ್ಯಕ್ತಿಗೆ ಶಿವಲಿಂಗದಿಂದ ಹೊರ ಬೀಳುವ ಶಕ್ತಿಶಾಲಿ ಲಹರಿಗಳನ್ನು ಸಹಿಸಲು ಸಾಧ್ಯವಾಗುತ್ತದೆ. ನಂದಿಯ ಕೊಂಬುಗಳಿಂದ ದರ್ಶನವನ್ನು ಪಡೆದುಕೊಳ್ಳದೇ ನೇರವಾಗಿ ಶಿವನ ದರ್ಶನವನ್ನು ಪಡೆದುಕೊಂಡರೆ ತೇಜಲಹರಿಗಳ ಆಘಾತದಿಂದ ಶರೀರದಲ್ಲಿ ಉಷ್ಣತೆ ನಿರ್ಮಾಣವಾಗುವುದು, ತಲೆ ಭಾರವಾಗುವುದು, ಶರೀರ ಅಕಸ್ಮಾತ್ತಾಗಿ ಕಂಪಿಸುವುದು ಮುಂತಾದ ತೊಂದರೆಗಳಾಗಬಹುದು.

Advertisement
Advertisement
Advertisement

ಶೃಂಗದರ್ಶನದ ಮಹತ್ವವೇನು ? : ‘ಶೃಂಗದರ್ಶನ’ ಎಂದರೆ ನಂದಿಯ ಕೊಂಬುಗಳ ಮೂಲಕ ಶಿವಲಿಂಗವನ್ನು ನೋಡುವುದು.  ಶೃಂಗದರ್ಶನದ ಯೋಗ್ಯ ಪದ್ಧತಿ

Advertisement

ವಾಮಹಸ್ತಿ ವೃಷಣ ಧರೋನಿ|
ತರ್ಜನಿ ಅಂಗುಷ್ಠ ಶೃಂಗೀ ಠೆವೋನಿ|| – ಶ್ರೀಗುರುಚರಿತ್ರೆ

ಅರ್ಥ: 1. ನಂದಿಯ ಬಲಬದಿಗೆ ಕುಳಿತುಕೊಂಡು ಅಥವಾ ನಿಂತುಕೊಂಡು ಎಡಗೈಯನ್ನು ನಂದಿಯ ವೃಷಣದ ಮೇಲಿಡಬೇಕು.
2. ಬಲಗೈಯ ತರ್ಜನಿ (ಹೆಬ್ಬೆರಳಿನ ಸಮೀಪದ ಬೆರಳು) ಮತ್ತು ಹೆಬ್ಬೆರಳನ್ನು ನಂದಿಯ ಎರಡು ಕೊಂಬುಗಳ ಮೇಲಿಡಬೇಕು.
ಎರಡು ಕೊಂಬುಗಳು ಮತ್ತು ಅದರ ಮೇಲಿರಿಸಿದ ಎರಡು ಬೆರಳುಗಳ ನಡುವಿನ ಖಾಲಿ ಜಾಗದಿಂದ ಶಿವಲಿಂಗದ ದರ್ಶನವನ್ನು ಪಡೆದುಕೊಳ್ಳಬೇಕು.

Advertisement

ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಶಿವಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತುಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಯಲ್ಲಿ ನಿಂತುಕೊಳ್ಳಬೇಕು.

ಶಿವಲಿಂಗದಿಂದ ಬರುವ ಶಕ್ತಿಶಾಲಿ ಸಾತ್ತ್ವಿಕ ಲಹರಿಗಳು ಮೊದಲು ನಂದಿಯ ಕಡೆಗೆ ಆಕರ್ಷಿತವಾಗಿ ನಂತರ ನಂದಿಯಿಂದ ವಾತಾವರಣದಲ್ಲಿ ಪ್ರಕ್ಷೇಪಿತವಾಗುತ್ತಿರುತ್ತವೆ. ನಂದಿಯ ವೈಶಿಷ್ಟ್ಯವೇನೆಂದರೆ ನಂದಿಯಿಂದ ಈ ಲಹರಿಗಳು ಆವಶ್ಯಕತೆಗನುಸಾರವಾಗಿಯೇ ಪ್ರಕ್ಷೇಪಿತವಾಗುತ್ತಿರುತ್ತವೆ. ಇದರಿಂದ ಶಿವಲಿಂಗದ ದರ್ಶನವನ್ನು ಪಡೆಯುವವರಿಗೆ ಲಹರಿಗಳು ಶಿವನಿಂದ ನೇರವಾಗಿ ಸಿಗುವುದಿಲ್ಲ; ಇದರಿಂದ ಅವರಿಗೆ ಶಿವನಿಂದ ಬರುವ ಶಕ್ತಿಶಾಲಿ ಲಹರಿಗಳಿಂದ ತೊಂದರೆಯಾಗುವುದಿಲ್ಲ. ಇಲ್ಲಿ ಗಮನದಲ್ಲಿಡಬೇಕಾದ ಮಹತ್ವದ ಸಂಗತಿಯೇನೆಂದರೆ ಶಿವನಿಂದ ಬರುವ ಲಹರಿಗಳು ಸಾತ್ತ್ವಿಕವೇ ಆಗಿದ್ದರೂ ಸಾಮಾನ್ಯ ವ್ಯಕ್ತಿಗಳ ಆಧ್ಯಾತ್ಮಿಕ ಮಟ್ಟವು ಹೆಚ್ಚಿಗೆ ಇಲ್ಲದ ಕಾರಣ ಆ ಸಾತ್ತ್ವಿಕ ಲಹರಿಗಳನ್ನು ಸಹಿಸಿಕೊಳ್ಳುವ ಕ್ಷಮತೆಯು ಅವರಲ್ಲಿರುವುದಿಲ್ಲ. ಆದುದರಿಂದ ಈ ಲಹರಿಗಳಿಂದ ಅವರಿಗೆ ತೊಂದರೆಯಾಗುವ ಸಾಧ್ಯತೆಯಿರುತ್ತದೆ. ಆದುದರಿಂದ ಸಾಮಾನ್ಯ ವ್ಯಕ್ತಿಗಳು ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತು ಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಗೆ ನಿಂತು ಕೊಳ್ಳಬೇಕು.

Advertisement

ಶೇ. 5೦ ಕ್ಕಿಂತಲೂ ಹೆಚ್ಚಿನ ಆಧ್ಯಾತ್ಮಿಕ ಮಟ್ಟವಿರುವ ಭಕ್ತರಲ್ಲಿ ದೇವತೆಗಳಿಂದ ಬರುವ ಸಾತ್ತ್ವಿಕ ಲಹರಿಗಳನ್ನು ಸಹಿಸುವ ಕ್ಷಮತೆಯಿರುತ್ತದೆ, ಆದುದರಿಂದ ಅವರಿಗೆ ಆ ಲಹರಿಗಳಿಂದ ತೊಂದರೆಯಾಗುವುದಿಲ್ಲ. ಇಂತಹ ಭಕ್ತರು ದೇವತೆಯ ದರ್ಶನವನ್ನು ಎದುರಿನಿಂದಲೇ ಪಡೆದುಕೊಳ್ಳಬೇಕು. ಅವರಿಗೆ ದೇವತೆಗಳಿಂದ ಪ್ರಕ್ಷೇಪಿತವಾಗುವ ಲಹರಿಗಳನ್ನು ಸಹಜವಾಗಿ ಗ್ರಹಿಸಲು ಸಾಧ್ಯವಾಗುತ್ತದೆ.

(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಶಿವ’)
ವಿನೋದ ಕಾಮತ್,
ವಕ್ತಾರರು, ಸನಾತನ ಸಂಸ್ಥೆ
ಸಂಪರ್ಕ : 9342599299

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |
January 23, 2025
8:49 PM
by: The Rural Mirror ಸುದ್ದಿಜಾಲ
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |
January 23, 2025
10:46 AM
by: The Rural Mirror ಸುದ್ದಿಜಾಲ
ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್
January 23, 2025
10:39 AM
by: The Rural Mirror ಸುದ್ದಿಜಾಲ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror