ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

February 25, 2025
9:41 PM
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಹತ್ವದ ದಿನ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ದಿನ.

ನಾಳೆ ದೇಶಾದ್ಯಂತ ಶಿವರಾತ್ರಿ ಸಂಭ್ರಮ. ಶಿವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಪ್ರತೀ ವ್ಯಕ್ತಿಯಲ್ಲೂ ಶಿವೋಹಂ ಶಿವೋಹಂ ಜಪ ನಡೆಯುತ್ತದೆ.………ಮುಂದೆ ಓದಿ……..

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಹತ್ವದ ದಿನ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ದಿನ. ಈ ದಿನ ಶಿವನನ್ನು ಪೂಜಿಸಿದರೆ, ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ನಂಬಿಕೆ.ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಹೇಳಿದ್ದಾನೆ ಎನ್ನುತ್ತದೆ ಶಿವಪುರಾಣ. ಮಹಾ ಶಿವರಾತ್ರಿಯಂದು ಬಿಲ್ವಪತ್ರೆಯನ್ನು ಶಿವಲಿಂಗದ ಮೇಲಿಟ್ಟು ಪೂಜಿಸಿದರೆ, ಯಾಗ ಮಾಡಿದ ಫಲ ದೊರೆಯುತ್ತದೆ ಎಂಬುದೂ ನಂಬಿಕೆ.

ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯೆಂದು ಹೇಳಲಾಗುತ್ತದೆ. ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ.  ಮಾಘ ಬಹುಳ ಚತುರ್ದಶಿಯ ರಾತ್ರಿಯೇ ಶಿವ ಪಾರ್ವತಿಯನ್ನು ವರಿಸಿದ್ದನಂತೆ. ಹೀಗಾಗಿ ಅಂದು ರಾತ್ರಿ ದೇವಾನು ದೇವತೆಗಳೆಲ್ಲರೂ ಜಾಗರಣೆ ಮಾಡಿ, ಗಿರಿಜಾ ಕಲ್ಯಾಣ ವೀಕ್ಷಿಸಿ, ಶಿವಪಾರ್ವತಿಯರಿಬ್ಬರನ್ನೂ ಪೂಜಿಸಿದರಂತೆ. ಹೀಗಾಗಿಯೇ ಜಾಗರಣೆ ಪದ್ಧತಿ ಆಚರಣೆಗೆ ಬಂದಿದೆ ಎನ್ನಲಾಗುತ್ತದೆ.

ಈ ಎಲ್ಲಾ ಧಾರ್ಮಿಕ ನಂಬಿಕೆಗಳ ಜೊತೆಗೆ ಶಿವಭಕ್ತರು ಶಿವಾರ್ಪಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.  ಮಹಾಶಿವರಾತ್ರಿ ಅಂಗವಾಗಿ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾರೆ. ಮೈಸೂರಿನ ನಂಜನಗೂಡು ಹಾಗೂ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲೂ ಶಿವರಾತ್ರಿ ಜಾಗರಣೆ ನಡೆಯಲಿದೆ. ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗೋಕರ್ಣ ಮತ್ತು ಮುರುಡೇಶ್ವರದಲ್ಲಿ ನಾಳೆ ಅಹೋರಾತ್ರಿ ಜಾಗರಣೋತ್ಸವಕ್ಕೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.  ಮಹಾಶಿವರಾತ್ರಿಯಂದು  ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಪ್ರಸಿದ್ದ ನಂದಿಯ ಭೋಗನಂದೀಶ್ವರ ದೇವಾಲಯ ಹಾಗೂ ನಂದಿಬೆಟ್ಟದ ಯೋಗ ನಂದೀಶ್ವರ ದೇವಾಲಯದಲ್ಲಿ ವಿಶೇಷಪೂಜೆ, ನಡೆಯಲಿದೆ.  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೈವಾರದ ಶ್ರೀ ಯೋಗಿ ನಾರಾಯಣ ಯತೀಂದ್ರರ ಮಠದಲ್ಲಿ ನಾಳೆ ಹರಿಕಥೆ ಹಮ್ಮಿಕೊಳ್ಳಲಾಗಿದೆ. ದೇವಾಲಯದಲ್ಲಿ ಮಹಾಶಿವಲಿಂಗ ದರ್ಶನವನ್ನು ಏರ್ಪಡಿಸಲಾಗಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror