Advertisement
ಸುದ್ದಿಗಳು

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

Share

ಶಿರಸಿಯ ‘ಅಡಿಕೆ, ಮೆಣಸು ಮತ್ತು ಏಲಕ್ಕಿ ವರ್ತಕರ ಸಂಘ’ದ ಪದಾಧಿಕಾರಿಗಳು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾದರು.  ಈ ಸಂದರ್ಭ ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳನ್ನು ತಡೆಹಿಡಿಯುತ್ತಿರುವುದರಿಂದ ವರ್ತಕರು ಮತ್ತು ಬೆಳೆಗಾರರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.​

ಮನವಿಯನ್ನು ಸ್ವೀಕರಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಅಡಿಕೆ ಮಾರುಕಟ್ಟೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಹಾಗೂ ನಮ್ಮ ವರ್ತಕರಿಗೆ ಮತ್ತು ರೈತರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಕ್ಯಾಂಪ್ಕೋ (CAMPCO) ಮತ್ತು ಅಡಿಕೆ ಮಹಾಮಂಡಳಿಯ ಪ್ರಮುಖರೊಂದಿಗೆ ಸೇರಿ ಈಗಾಗಲೇ ನಾವು ಕಾರ್ಯಪ್ರವೃತ್ತರಾಗಿದ್ದೇವೆ.​ ಈ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ಈಗಾಗಲೇ ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದ ಸಚಿವರೊಂದಿಗೆ ಸಕಾರಾತ್ಮಕ ಮಾತುಕತೆ ನಡೆಸಲಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಮ್ಮ ನಿರಂತರ ಪ್ರಯತ್ನ ಸಾಗಿದೆ.​ನಮ್ಮ ಭಾಗದ ಆರ್ಥಿಕತೆಯ ಬೆನ್ನೆಲುಬಾಗಿರುವ ಅಡಿಕೆ ವರ್ತಕರು ಹಾಗೂ ರೈತರ ಹಿತಕಾಪಾಡಲು ನಾವು ಸದಾ ಬದ್ಧರಾಗಿದ್ದೇವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The office-bearers of the Arecanut, Pepper and Cardamom Merchants Association, Sirsi, met MP Vishweshwar Hegde Kageri and submitted a memorandum regarding the detention of arecanut trucks in Maharashtra. The MP said discussions are underway with CAMPCO, the Arecanut Federation, and the Central and Maharashtra governments to resolve the issue and safeguard the interests of farmers and traders.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

5 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

6 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

6 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

6 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

6 hours ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 day ago