Advertisement
MIRROR FOCUS

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?

Share

ಮಹಾರಾಷ್ಟ್ರದಲ್ಲಿ ಎಫ್‌ಡಿಎ (Food and Drug Administration) ಅಧಿಕಾರಿಗಳು ಅಡಿಕೆ ಸಾಗಾಟದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಡಿಕೆ ವಲಯದಲ್ಲಿ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದ ಮೂಲಕ ಸಾಗುವ ಅಡಿಕೆ ಸರಕುಗಳ ವಿರುದ್ಧ ಪ್ರಕರಣಗಳು ದಾಖಲಾಗುತ್ತಿರುವುದು ಹಾಗೂ ವಾಹನ ಜಪ್ತಿ ಮಾಡುವ ಕ್ರಮಗಳು ನಡೆಯುತ್ತಿರುವ ವರದಿಗಳ ಬೆನ್ನಲ್ಲೇ ಕರ್ನಾಟಕ ಅಡಿಕೆ ಚೇಂಬರ್ ಆಫ್ ಕಾಮರ್ಸ್ ತುರ್ತು ಸಭೆಯನ್ನು ಕರೆದಿದೆ.

ಕರ್ನಾಟಕ ಅಡಿಕೆ ಚೇಂಬರ್ ಆಫ್ ಕಾಮರ್ಸ್ ನೇತೃತ್ವದಲ್ಲಿ ಜೂನ್ 22 ರಂದು ಮಧ್ಯಾಹ್ನ 3.30ಕ್ಕೆ ಭೀಮಸಮುದ್ರದ ಎಪಿಎಂಸಿ ಆವರಣದಲ್ಲಿ ತುರ್ತು ಸಭೆ ನಡೆಯಲಿದೆ. ಸಭೆಯಲ್ಲಿ ಅಡಿಕೆ ವ್ಯಾಪಾರಿಗಳು, ಸಂಸ್ಕರಣಾ ಘಟಕಗಳ ಪ್ರತಿನಿಧಿಗಳು ಹಾಗೂ ಅಡಿಕೆ ಉದ್ಯಮಕ್ಕೆ ಸಂಬಂಧಿಸಿದ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ.

ಮಹಾರಾಷ್ಟ್ರ ಎಫ್‌ಡಿಎ ಆಯುಕ್ತ ತುಕಾರಾಂ ಮುಂಡೆ ಅವರ ಹೇಳಿಕೆಯನ್ನು ಉಲ್ಲೇಖಿಸಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ನಿಷೇಧಿತ ಅಥವಾ ಕಾನೂನುಬಾಹಿರ ಉತ್ಪನ್ನಗಳ ತಯಾರಿಕೆ, ವ್ಯಾಪಾರ ಅಥವಾ ಸಾಗಾಟಕ್ಕೆ ಬಳಸುವ ಸರಕುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ” ಕಳಪೆ ಅಡಿಕೆ ” ಸರಕುಗಳನ್ನೂ ಪರಿಗಣಿಸಲಾಗುತ್ತಿದೆ ಎಂಬ ಮಾಹಿತಿ ಅಡಿಕೆ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಇಂತಹ ಸರಕುಗಳನ್ನು ಸಾಗಿಸುತ್ತಿರುವ ವಾಹನಗಳು ಪತ್ತೆಯಾದರೆ ಸರಕು ಮತ್ತು ವಾಹನ ಎರಡನ್ನೂ ಜಪ್ತಿ ಮಾಡುವ ಸಾಧ್ಯತೆ ಇದೆ. ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೆ ಸರಕುಗಳು ದೀರ್ಘಕಾಲ ಜಪ್ತಿಯಲ್ಲಿರಬಹುದು. ಇದರಿಂದ ರೈತರು, ವ್ಯಾಪಾರಿಗಳು, ಸಂಸ್ಕರಣಾ ಘಟಕಗಳು ಮತ್ತು ಸಾರಿಗೆದಾರರಿಗೆ ಆರ್ಥಿಕ ಹೊರೆ ಉಂಟಾಗುವ ಆತಂಕ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಅಡಿಕೆ ಉದ್ಯಮದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಮಧ್ಯಪ್ರವೇಶ ಕೋರಿ ಚರ್ಚೆ ನಡೆಸಲು ಹಾಗೂ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ತುರ್ತು ಸಭೆ ಕರೆಯಲಾಗಿದೆ. ಅಡಿಕೆ ವಲಯಕ್ಕೆ ಸಂಬಂಧಿಸಿದ ಎಲ್ಲರೂ ಸಭೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ಅಡಿಕೆ ಚೇಂಬರ್ ಆಫ್ ಕಾಮರ್ಸ್ ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka Areca Chamber of Commerce has convened an emergency meeting on June 22, 2026, following concerns over Maharashtra FDA actions against the transportation of prohibited goods, including rejected arecanut consignments. Traders fear vehicle seizures, legal complications and financial losses, prompting industry representatives to discuss collective action and seek government intervention.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

35 minutes ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

8 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

19 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

23 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago