ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

July 9, 2026
9:12 PM
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. 700ಕ್ಕೂ ಹೆಚ್ಚು ಪ್ರಕರಣಗಳ ಆಧಾರದ ಮೇಲೆ ಸಂಘಟಿತ ಅಪರಾಧ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಿದೆ.

ಮಹಾರಾಷ್ಟ್ರದಲ್ಲಿ ನಿಷೇಧಿತ ಗುಟ್ಕಾ ಉತ್ಪಾದನೆ, ಸಾಗಾಟ ಮತ್ತು ಮಾರಾಟದ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಗುಟ್ಕಾ ತಯಾರಕರು, ಸಾಗಣೆದಾರರು ಹಾಗೂ ಮಾರಾಟಗಾರರನ್ನು ಸಂಘಟಿತ ಅಪರಾಧ ಜಾಲ (Organised Crime Syndicate) ಎಂದು ಪರಿಗಣಿಸಿ, ಅವರ ವಿರುದ್ಧ ಮಹಾರಾಷ್ಟ್ರ ಕಂಟ್ರೋಲ್ ಆಫ್ ಆರ್ಗನೈಸ್ಡ್ ಕ್ರೈಂ ಆಕ್ಟ್ (MCOCA) ಅಡಿ ಪ್ರಕರಣ ದಾಖಲಿಸಲು ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ನಿರ್ಧರಿಸಿದೆ.

ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಆಯುಕ್ತ ತುಕಾರಾಂ ಮುಂಡೆ ಅವರು ಎನ್‌ಡಿಟಿವಿಗೆ  ನೀಡಿದ ಸಂದರ್ಶನದಲ್ಲಿ , ರಾಜ್ಯದಲ್ಲಿ ಗುಟ್ಕಾವನ್ನು 2004ರಿಂದಲೇ ನಿಷೇಧಿಸಲಾಗಿದೆ. ಆದರೂ ಉತ್ಪಾದಕರು, ಸಾಗಣೆದಾರರು ಮತ್ತು ಮಾರಾಟಗಾರರು ಸಂಘಟಿತ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಾಮಾನ್ಯ ಆಹಾರ ಸುರಕ್ಷತಾ ಕಾನೂನುಗಳ ಬದಲು ಎಂಸಿಒಸಿಎ ಅಡಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಇದುವರೆಗೆ ರಾಜ್ಯದಾದ್ಯಂತ 700 ಕ್ಕೂ ಹೆಚ್ಚು ಎಫ್‌ಐಆರ್‌ಗಳು ಗುಟ್ಕಾ ಸಂಬಂಧ ದಾಖಲೆಯಾಗಿದ್ದು, ಈ ಪ್ರಕರಣಗಳ ಆಧಾರದ ಮೇಲೆ ಕಠಿಣ ಕಾನೂನು ಜಾರಿಗೊಳಿಸಲಾಗುತ್ತಿದೆ. ಜಾಲದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ಕುರಿತಂತೆ ಪ್ರತ್ಯೇಕ ದಾಖಲೆ ಸಿದ್ಧಪಡಿಸಿ, ತಯಾರಕರಿಂದ ಹಿಡಿದು ಸಾಗಣೆದಾರರು ಮತ್ತು ಮಾರಾಟಗಾರರ ತನಕ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತುಕಾರಾಂ ಮುಂಡೆ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಆಹಾರ ಸುರಕ್ಷತೆ, ಕಳಪೆ ಗುಣಮಟ್ಟದ ಆಹಾರ, ನಕಲಿ ಔಷಧ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಅಕ್ರಮ ಚಟುವಟಿಕೆಗಳ ವಿರುದ್ಧ ರಾಜ್ಯ ಸರ್ಕಾರ ಸಮಗ್ರ ಕಾರ್ಯಾಚರಣೆ ನಡೆಸುತ್ತಿದ್ದು, ಮಹಾರಾಷ್ಟ್ರದಲ್ಲಿ ಒಂದು ಗ್ರಾಂ ಗುಟ್ಕಾವೂ ಲಭ್ಯವಾಗದಂತೆ ಮಾಡುವುದೇ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.

Maharashtra has decided to invoke the Maharashtra Control of Organised Crime Act (MCOCA) against gutka manufacturers, transporters and sellers, treating them as organised crime syndicates. The state FDA says over 700 FIRs have already been registered, and detailed dossiers are being prepared to dismantle the entire illegal network.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror