Advertisement
MIRROR FOCUS

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು | ಮಹಾರಾಷ್ಟ್ರದಿಂದ 1.20 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ | ಭೀಮಾನದಿ ಪಾತ್ರದಲ್ಲಿ ಪ್ರವಾಹ ಭೀತಿ

Share

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುವ ಬಗ್ಗೆ ಹಮಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ  ಭಾರೀ ಮಳೆ  ಮುಂದುವರೆದಿದ್ದು ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.

Advertisement
Advertisement

ಮಹಾರಾಷ್ಟ್ರದಿಂದ ಒಟ್ಟು 1,20,000 ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಸಿದ್ದರಿಂದ ವಿಜಯಪುರ  ಜಿಲ್ಲೆಯಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಚಡಚಣ ತಾಲೂಕಿನಲ್ಲಿ ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಉಮರಾಣಿ- ಲವಗಿ ಬ್ಯಾರೇಜ್ ಮುಳುಗಡೆಯಾಗಿದೆ.  ಭಾರೀ ನೀರು ಹರಿಯುತ್ತಿರುವುದರಿಂದ ಜಿಲ್ಲೆಯ ಭೀಮಾ ನದಿ ಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ. ಚಡಚಣ, ಇಂಡಿ, ಆಲಮೇಲ, ಸಿಂದಗಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ.

Advertisement

ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಇಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ಅಂತೆಯೇ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement

ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಇನ್ನು ಭಾನುವಾರ ಬಿಸಿಲ ವಾತಾವರಣಕ್ಕೆ ಸಾಕ್ಷಿಯಾಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ಇಂದು ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20-09-2024 | ಸೆ.23 ರಿಂದ ಕೆಲವು ಕಡೆ ಹೆಚ್ಚು ಮಳೆ ನಿರೀಕ್ಷೆ |

ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

4 hours ago

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

18 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

19 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

20 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

20 hours ago