ಕಳೆದ ಕೆಲವು ವರ್ಷಗಳಿಂದ ದಸರಾ ಹಬ್ಬ ಬಂದಾಗ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರ ಆಚರಣೆಯ ಕೂಗು ಕೇಳಿಬರುತ್ತದೆ. ಒಂದಷ್ಟು ಪರ ವಿರೋಧ ಚರ್ಚೆಗಳು ನಡೆದು ದಸರಾ ಮುಗಿಯುವ ವೇಳೆಗೆ ತಣ್ಣಗಾಗುತ್ತದೆ. ಈ ಬಾರಿಯೂ ಮಹಿಷಾ ದಸರ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋ ಮಾಡಲು ಹೊರಟಿದ್ದ ಎರಡು ತಂಡಗಳಿಗೆ ಅನುಮತಿ ನಿರಾಕರಿಸಿ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಅ. 13ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಅನುಮತಿ ಕೋರಿತ್ತು. ಮತ್ತೊಂದು ಕಡೆ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬಿಜೆಪಿ ನಗರ ಸಮಿತಿ ಅನುಮತಿ ಕೋರಿತ್ತು. ʼʼಮೇಲ್ಕಂಡ ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಎರಡು ಕಾರ್ಯಕ್ರಮಗಳಿಗೆ ಪೊಲೀಸ್ ಅನುಮತಿಯನ್ನು ನಿರಾಕರಣೆ ಮಾಡಲಾಗಿದೆʼʼ ಎಂದು ಮೈಸೂರು ನಗರ ಪೊಲೀಸ್ ಅಯುಕ್ತ ಬಿ.ರಮೇಶ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಮಹಿಷ ದಸರಾ ಹಾಗೂ ಇದನ್ನು ವಿರೋಧಿಸಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಅನುಮತಿಯನ್ನು ಕೇಳಲಾಗಿತ್ತು. ಆದರೆ, ಇವರೆಡೂ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಕುಂದು ತರಬಹುದೆಂಬ ಲೆಕ್ಕಾಚಾರದಿಂದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಎರಡೂ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನಿರಾಕರಣೆ ಮಾಡಿದ್ದಾರೆ.
ಈ ಮೂಲಕ ಮಹಿಷ ದಸರಾ ಆಚರಣಾ ಸಮಿತಿಗೆ ಹಾಗೂ ಚಾಮುಂಡಿ ಚಲೋಗೂ ಅನುಮತಿ ಇಲ್ಲ. ಅ.13 ರಂದು ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9-30 ಗಂಟೆಗೆ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ತೀರ್ಮಾನ ಮಾಡಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯದ್ವಾರ ತಾವರೆಕಟ್ಟೆ ಬಳಿಯಿಂದ ಜಾಥ ಹೊರಡಲಾಗುತ್ತದೆ. ಮತ್ತೊಂದೆಡೆ ಬಿಜೆಪಿ ಮಹಿಷ ದಸರಾ ಆಚರಣೆ ವಿರೋಧಿಸಿತ್ತು. ಅ.13 ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತುವುದು. ವಾಹನಗಳಲ್ಲಿ ರಸ್ತೆಯ ಮುಖಾಂತರ ಚಾಮುಂಡಿ ಬೆಟ್ಟಕ್ಕೆ ತೆರಳುವುದು. ಚಾಮುಂಡಿ ಬೆಟ್ಟದಲ್ಲಿ ಚಲೋ ನಡೆಸಲು ತೀರ್ಮಾನಿಸಿತ್ತು. ಇಲ್ಲಿ ಗಲಭೆಗಳಾಗುವ ಮುನ್ಸೂಚನೆಯಿಂದ ಎರಡು ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ. ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಮಹಿಷ ದಸರಾ- ಚಾಮುಂಡಿ ಚಲೋಗೆ ಬ್ರೇಕ್ ಹಾಕಲಾಗಿದೆ.
– ಅಂತರ್ಜಾಲ ಮಾಹಿತಿ
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…